ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣೆ

ಗುಬ್ಬಿ ಸುದ್ದಿ ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಲಾಯಿತು.   ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ’ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು. ಪೂಜೆ ಸಲ್ಲಿಸಿ ಮಾತನಾಡಿದ ಅವರು ‘ಹಡಪದ ಅಪ್ಪಣ್ಣ ಅವರು…

Read More

ತುಮಕೂರು ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ.

ಗೃಹ ಸಚಿವರ ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ ?.ನಕಲಿ ಕ್ಲಿನಿಕ್ ಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಗೃಹ ಸಚಿವರೇ ? ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ   ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು , ಕಣ್ಮುಚ್ಚಿ ಕುಳಿತಿರುವುದರ ಹಿಂದಿನ ಮರ್ಮವೇನು ಜಿಲ್ಲೆಯ ನಕಲಿ ವೈದ್ಯರ ಮೇಲೆ  ಕ್ರಮ ಏಕೆ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದು ಇದಕ್ಕೆಲ್ಲ ಡಿ, ಎಚ್, ಓ, ರವರೆ ಉತ್ತರಿಸಬೇಕಾಗಿದೆ     ವೈಧ್ಯ ದೇವೋಭವ ಎಂಬ…

Read More

ವಿಶ್ವಕರ್ಮ ಸಮಾಜದಿಂದ ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷೆ ಶೋಭಾ ಸೀನಾಚಾರ್ ಗೆ ಸನ್ಮಾನ

ತುರುವೇಕೆರೆ: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೋಭಾಸೀನಾಚಾರ್ ಅವರನ್ನು ಸನ್ಮಾನಿಸಲಾಯಿತು.       ಪಟ್ಟಣದ ಬಾವಿಕೇರಿಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶೋಭಾ ಸೀನಾಚಾರ್ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಕಾಣಿಕೆ ನೀಡಿ ಗೌರವಿಸಲಾಯಿತು.     ಸಮಾರಂಭ ಕುರಿತು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಟಿ.ಎನ್. ಅರುಣ್ ಕುಮಾರ್ ಮಾತನಾಡಿ, ಅಂದು ವಿಶ್ವಕರ್ಮ ಸಮುದಾಯ ಕೇವಲ ದೇವರ ವಿಗ್ರಹ, ಮರಗೆಲಸದಂತಹ…

Read More

ದುರುಪಯೋಗ ತಡೆಗಟ್ಟಲು ಹೈ ರೆಸ್ಯೂಲೆಷನ್ ಜಾಮರ್‌ ಅಳವಡಿಕೆ: ಗೃಹ ಸಚಿವ ಪರಮೇಶ್ವರ

ಬೆಂಗಳೂರು:-ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸ್ಯೂಲೇಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.     ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.     ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು…

Read More

ಡಾ.ಲಕ್ಷ್ಮೀ ಸಾಗರ್ ಅವರಿಗೆ ಶ್ರೇಷ್ಠ ವೈದ್ಯ ಪ್ರಶಸ್ತಿ ಸಾರ್ವಜನಿಕರಿಂದ ಅಭಿನಂದನೆ

ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಲಕ್ಷ್ಮೀ ಸಾಗರ್ ಅವರಿಗೆ ಸರ್ಕಾರ ಶ್ರೇಷ್ಠ ವೈದ್ಯ ಪ್ರಶಸ್ತಿ ನೀಡಿರುವ ಹಿನ್ನೆಲೆಯಲ್ಲಿ ಕಡಬ ಸುತ್ತಮುತ್ತಲ ಸಾರ್ವಜನಿಕರು ಅವರಿಗೆ ಅಭಿನಂದನೆ ಸಲ್ಲಿಸಿದರು   ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಂದ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ ಬಿಂದು ಮಾಧವ್ ಸರ್ಕಾರಿ ಆಸ್ಪತ್ರೆಗಳೆಂದರೆ ಜನರು ಮೂಗು ಮುರಿಯುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೂ ಸಹ ಉತ್ತಮ ವೈದ್ಯರಿದ್ದು ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ…

Read More

ಉದ್ಯೋಗ, ಅಧಿಕಾರ ಯಾವತ್ತೂ ಅಳತೆಗೋಲಾಗಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಶ್ರೀ ಸಿದ್ದಲಿಂಗ ಸ್ವಾಮೀಜಿ

ತುಮಕೂರು- ಉದ್ಯೋಗ, ಅಧಿಕಾರ ಯಾವತ್ತೂ ಕೂಡ ಅಳತೆಗೋಲಾಗಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕರೆ ನೀಡಿದರು.     ನಾವು ಮಾಡುವ ಉದ್ಯೋಗದಲ್ಲಿ ದಿವಾನ ಆದರೂ ಸರಿ, ಜವಾನ ಆದರೂ ಸರಿ ಎಲ್ಲರಿಗೂ ಸಮಾನವಾದಂತಹ ಅವಕಾಶ ಕಲ್ಪಿಸಿಕೊಟ್ಟಾಗ ಮಾತ್ರ ಬಸವಣ್ಣನ ಸಮಾನತೆ ಸಂದೇಶ ಸಾರ್ಥಕತೆ ಪಡೆಯುತ್ತದೆ ಎಂದು ಅವರು ಹೇಳಿದರು. ನಗರದ ಎಸ್ಐ ಟಿ ಯ ಬಿರ್ಲಾ ಆಡಿಟೋರಿಯಂನಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬೋಧಕೇತರ ಸಂಘದ ವತಿಯಿಂದ ಏರ್ಪಡಿಸಿದ್ದ ಬಸವ…

Read More

ಎಲ್ಲಾ ಕಲೆಗಳ ತಾಯಿಬೇರು ಜನಪದ ಕಲೆ ಡಾ.ಲಕ್ಷ್ಮಣದಾಸ್

ತುಮಕೂರು:ವಿದ್ಯಾರ್ಥಿ,ಯುವಜನರಿಗೆ ಎಲ್ಲಾ ಕಲೆಗಳ ತಾಯಿಬೇರಾಗಿರುವ ಜನಪದ ಕಲೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಶ್ರೀವಿನಾಯಕ ಕಲಾ ಸಂಘ ಹಮ್ಮಿಕೊಂಡಿರುವ ಜನಪದ ಸಂಭ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಕಲಾಶ್ರೀ ಡಾ.ಲಕ್ಷ್ಮಣದಾಸ್ ತಿಳಿಸಿದ್ದಾರೆ.       ತುಮಕೂರು ತಾಲೂಕು ಸ್ವಾಂದೇನಹಳ್ಳಿ ಗ್ರಾಮದಲ್ಲಿ ಶ್ರೀವಿನಾಯಕ ಸಾಂಸ್ಕøತಿಕ ಕಲಾ ಸಂಘ(ರಿ),ಬೆಜ್ಜಿಹಳ್ಳಿ,ಶಿರಾ ತಾಲೂಕು ಇವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ತುಮಕೂರು ವಿವಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜನಪದ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ತುಮಕೂರು…

Read More

ನೂತನ ಸಂಸದರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣನವರಿಗೆ ಎನ್.ಡಿ. ಎ ಪಕ್ಷದ ಕಾರ್ಯಕರ್ತರಿಂದ ಅಭಿನಂದನೆ

ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಹೇರೂರು ಬಳಿಯಿರುವ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತುಮಕೂರು ಜಿಲ್ಲೆಯ ನೂತನ ಸಂಸದರು ಹಾಗೂ ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಸಚಿವರಾದ ವಿ.ಸೋಮಣ್ಣ ನವರಿಗೆ ಎನ್.ಡಿ. ಎ ಪಕ್ಷದ ಕಾರ್ಯ ಕರ್ತರು ಹಾಗೂ ಮತದಾರರಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.         ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ಶನಿವಾರ ಮತ್ತು ಭಾನುವಾರ ತುಮಕೂರಿನಲ್ಲಿ ಇರುತ್ತೇನೆ. ರೈತರು ಮತ್ತು ಜನ ಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಅವರ ಕುಂದು ಕೊರತೆಗಳನ್ನು…

Read More

ಪೊಲೀಸರ ಹತ್ಯೆಯ ನಂತರ ತಲೆ ಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

 ಪಾವಗಡ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ಹತ್ಯೆಗೈದಿದ್ದ ಮಾಜಿ  ನಕ್ಸಲೈಟ್  ವ್ಯಕ್ತಿಯನ್ನು   ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.     2005ರ ಫೆಬ್ರವರಿ 10ರಂದು ಪಾವಗಡ ತಾಲ್ಲೂಕು ತಿರುಮಣಿ ಪೊಲೀಸ್ ಠಾಣೆಯ ವ್ಯಾಪ್ತಿಯ ವೆಂಕಟಮ್ಮನಹಳ್ಳಿಯ ಶಾಲೆಯಲ್ಲಿ ಭದ್ರತೆಗೆ ನೇಮಕವಾಗಿದ್ದ 9ಜನ ಪೊಲೀಸರನ್ನು  ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಆಂಧ್ರಪ್ರದೇಶದ ಮಾಜಿ ನಕ್ಸಲ್ ಬಂದೆಲ ಬಾಯನ್ನನ ಮಗನಾದ ಚಂದ್ರ ಮುತ್ಯಾಲು ಅಲಿಯಾಸ್ ಬಂದೆಲ ಮುತ್ಯಾಲುನನ್ನು ಪಾವಗಡ ಗ್ರಾಮಾಂತರ ವೃತ್ತದ ಸಿ ಗಿರೀಶ್, ಎಎಸ್ಐ ಗೋವಿಂದರಾಜು ಮತ್ತು ಸಿಬ್ಬಂದಿಗಳಾದ ಧರ್ಮಪಾಲನಾಯ್ಕ,…

Read More

ಕಾರ್ಗಿಲ್ 25 ನೇ ವಿಜಯೋತ್ಸವ ಆಚರಣೆ ಸಿದ್ದತೆಗೆ ಸ್ಥಳ ಪರಿಶೀಲಿಸಿದ ಮುರುಳಿಧರ ಹಾಲಪ್ಪ

ತುಮಕೂರು: ಕಾರ್ಗಿಲ್ ೨೫ನೇ ವಿಜಯೋತ್ಸವ ಆಚರಣೆ ಸಂಬಂಧಪಟ್ಟಂತೆ ನಗರದ ಅಮಾನಿಕೆರೆಯಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಆಯೋಜಿಸುವ ಕಾರ್ಯಕ್ರಮದ ಸಂಬಂಧ ಇಂದು ಮುರುಳೀಧರ ಹಾಲಪ್ಪ ಮತ್ತು ಟೂಡಾ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.     ತುಮಕೂರು ಅಮಾನಿಕೆರೆಯ ಧ್ವಜ ಸ್ತಂಭ ಮತ್ತು ಹುತಾತ್ಮರ ಸ್ಮಾರಕದ ಬಳಿ ಜುಲೈ ೨೫ ರಂದು ವಿವಿಧ ಕಾರ್ಯಕ್ರಮಗಳನ್ನು  ಎನ್.ಸಿ.ಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸುವ ಸಲುವಾಗಿ ಟೂಡಾ ಆಯುಕ್ತರಾದ ಡಾ.ಬಸಂತಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮುರುಳೀಧರ ಹಾಲಪ್ಪ ಸ್ಥಳ…

Read More
error: Content is protected !!