
ಜಿಲ್ಲಾ ಸುದ್ದಿಗಳು
ಜಿಲ್ಲಾಧಿಕಾರಿಗಳಿಂದ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ
ತುಮಕೂರು: ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ವತಿಯಿಂದ ಅಂದಾಜು 107ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಅಂತಿಮ ಹಂತದಲ್ಲಿರುವ 30 ಎಂಎಲ್ಡಿ ತೃತೀಯ ಹಂತದ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಇಂದು ಪರಿಶೀಲಿಸಿದರು. ಸ್ಥಳದಲ್ಲಿದ್ದ ಕೆಐಎಡಿಬಿ ಕಾರ್ಯನಿರ್ವಾಹಕ ಇಂಜಿನಿಯರ್ ಲಕ್ಷ್ಮೀಶ್ ಮಾತನಾಡಿ, ತ್ಯಾಜ್ಯ ನೀರನ್ನು 2ನೇ ಹಂತದಲ್ಲಿ ಶುದ್ಧೀಕರಣಗೊಳಿಸಿ ಭೀಮಸಂದ್ರ ಕೆರೆಗೆ ಬಿಟ್ಟಿದ್ದು, ಸದರಿ ನೀರನ್ನು ವಸಂತ ನರಸಾಪುರ ಪ್ರದೇಶದಲ್ಲಿರುವ ತ್ಯಾಜ್ಯ…
ಜಿಲ್ಲೆಗೆ ಹೇಮಾವತಿ ನೀರು ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿಗಳು ಮನವಿ
ತುಮಕೂರು: ಹೇಮಾವತಿ ಜಲಾಶಯದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಕೆರೆ ಕೆಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ತುಮಕೂರು ಶಾಖಾ ಕಾಲುವೆಗೆ ನೀರು ಹರಿದಿದ್ದು, ತಿಪಟೂರು ತಾಲ್ಲೂಕು ಗಂಗನಘಟ್ಟವನ್ನು ತಲುಪಿದೆ. ಜಲಾಶಯದ ಒಳಹರಿವಿನ ಪ್ರಮಾಣ ಯಾವುದೇ ಸಮಯದಲ್ಲಾದರೂ ಏರಿಕೆಯಾಗುವ ಸಂಭವವಿದ್ದು, ಹೆಚ್ಚುವರಿ ನೀರನ್ನು ನಾಲೆಗೆ ಬಿಡುವುದರಿಂದ ಸಾರ್ವಜನಿಕರು ನಾಲೆಯ ಅಕ್ಕ-ಪಕ್ಕ ಸುಳಿದಾಡಬಾರದು ಹಾಗೂ ಈಜಲು, ಜಾನುವಾರುಗಳಿಗೆ ನೀರು ಕುಡಿಸಲು, ಬಟ್ಟೆ ಒಗೆಯಲು, ಮತ್ತಿತರ ಕಾರಣಗಳಿಗಾಗಿ ನಾಲೆ ಬಳಿಗೆ…
ಡೆಂಗ್ಯೂ ಉತ್ಪತ್ತಿ ಕೇಂದ್ರವಾದ ಜಿಲ್ಲಾಸ್ಪತ್ರೆ ಆರೋಗ್ಯ ಅಧಿಕಾರಿಗೆ ಜಿಲ್ಲಾಧಿಕಾರಿಗಳಿಂದ ತೀವ್ರ ತರಾಟೆ
ತುಮಕೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಬಳಿಯಿರುವ ಶೌಚಾಲಯದಲ್ಲಿ ರಾಶಿ ರಾಶಿ ಕಸದ ಮೂಟೆಯನ್ನು ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಈಗಿಂದೀಗಲೇ ಕಸದ ಮೂಟೆಯನ್ನು ತೆರವುಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಅಸ್ಗರ್ ಬೇಗ್ ಅವರಿಗೆ ಎಚ್ಚರಿಕೆ ನೀಡಿದರು. ಅವರು ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಡೆಂಗ್ಯು ಚಿಕಿತ್ಸಾ ವಿಭಾಗ, ನವಜಾತ ಶಿಶು ವಿಭಾಗ, ಹೆರಿಗೆ ಕೊಠಡಿ, ಮಹಿಳಾ ವಿಭಾಗ, ಪ್ರಸವಪೂರ್ವ ಆರೈಕೆ ಕೊಠಡಿ, ಆರ್ಒಪಿ ಕೊಠಡಿ, ಡಾಟಾ ಎಂಟ್ರಿ ಆಪರೇಟರ್ ಕೊಠಡಿ, ಮತ್ತಿತರ…
ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣೆ
ಗುಬ್ಬಿ ಸುದ್ದಿ ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಲಾಯಿತು. ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ’ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು. ಪೂಜೆ ಸಲ್ಲಿಸಿ ಮಾತನಾಡಿದ ಅವರು ‘ಹಡಪದ ಅಪ್ಪಣ್ಣ ಅವರು…
ತುಮಕೂರು ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ.
ಗೃಹ ಸಚಿವರ ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ ?.ನಕಲಿ ಕ್ಲಿನಿಕ್ ಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಗೃಹ ಸಚಿವರೇ ? ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು , ಕಣ್ಮುಚ್ಚಿ ಕುಳಿತಿರುವುದರ ಹಿಂದಿನ ಮರ್ಮವೇನು ಜಿಲ್ಲೆಯ ನಕಲಿ ವೈದ್ಯರ ಮೇಲೆ ಕ್ರಮ ಏಕೆ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದು ಇದಕ್ಕೆಲ್ಲ ಡಿ, ಎಚ್, ಓ, ರವರೆ ಉತ್ತರಿಸಬೇಕಾಗಿದೆ ವೈಧ್ಯ ದೇವೋಭವ ಎಂಬ…
ಗುತ್ತಿಗೆ ಆಧಾರದ ಅಡಿಯಲ್ಲಿ ನೇಮಕಗೊಂಡ ಸಿಬ್ಬಂದಿಗಳಿಂದ ಹಣ ವಸೂಲಿಗಿಳಿದ ಆರೋಗ್ಯ ಇಲಾಖೆ
ಡಿ ಹೆಚ್ ಓ ಸಾಹೇಬರೇ ಈ ಅಕ್ರಮಕ್ಕೆ ಕಡಿವಾಣ ಯಾವಾಗ ???? ತುಮಕೂರು ನಗರದ ಕೋತಿ ತೋಪಿನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗೆಂದು ಬರುವ ಸಾರ್ವಜನಿಕರಿಗೆ ಈ ಆರೋಗ್ಯ ಕೇಂದ್ರದಲ್ಲಿ ಬಿಪಿ ಪರೀಕ್ಷೆಗೆ ಹಣ ಕೊಡಬೇಕು ಮಧುಮೇಹ ಕಾಯಿಲೆಯ ರೋಗಿಗಳು ರಕ್ತಪರೀಕ್ಷೆ ಮಾಡಿಸಲು ಈ ಆರೋಗ್ಯ ಕೇಂದ್ರಕ್ಕೆ ಬಂದರೆ ಇಲ್ಲಿನ ಸಿಬ್ಬಂದಿಗಳು ಕೇಳಿದಷ್ಟು ಹಣ ನೀಡಬೇಕು ಇದು ಸರ್ಕಾರಿ ಆಸ್ಪತ್ರೆಯೋ ಅಥವಾ ಖಾಸಗಿ ಆಸ್ಪತ್ರೆಯೋ ಎಂಬ ಅನುಮಾನ ಇಲ್ಲಿನ ಸಾರ್ವಜನಿಕರಲ್ಲಿ ಗೊಂದಲ…
ಸಮಾಜದಲ್ಲಿ ಸಮಾನತೆ, ಸಂಘಟನೆ ಬೆಳೆದರೆ ಮಾತ್ರ ಯಶಸ್ವಿಗೆ ಮುನ್ನುಡಿ -ಸಾಣೇಹಳ್ಳಿ ಶ್ರೀ
ತಿಪಟೂರು ನ್ಯೋಸ್ ತಾಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿ ಎಸ್.ಎಲ್.ಬಿ.ಎಸ್ ಪ್ರೌಢಶಾಲಾ ಆವರಣದಲ್ಲಿ ಶಿವ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ,ಲಿಂಗೈಕ್ಯ ಎಸ್.ಬಿ. ಗಂಗಾಧರ ಗೌಡರ ಶಿವಗಣಾರಧನೆ ಮತ್ತು ಧಾರ್ಮಿಕ ಸಮಾರಂಭದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ,ಮಾತನಾಡಿದ ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿಯ ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿರವರು,ಗಂಗಾಧರ ಗೌಡರ ನಿಧನ ಇಡೀ ಸಮುದಾಯಕ್ಕೆ ತುಂಬಾ ದುಃಖಕರವಾಗಿದ್ದು,ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟು,ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಟಿ ಮಾಡಿಕೊಟ್ಟ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ.ಸಮಾಜದಲ್ಲಿ ಸಮಾನತೆ ಮತ್ತು ಸಂಘಟನೆ ಅಳವಡಿಸಿಕೊಂಡಾಗ ಯಶಸ್ವಿಗೆ…
ಬಾಬು ಜಗಜೀವನ ರಾಮ್ ಸಂಶೋಧನಾ ಕೇಂದ್ರ ಲೋಕಾರ್ಪಣೆಗೆ ಹೋರಾಟ ದಲಿತ ಮುಖಂಡರು
ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಕ್ಷಣಾ ಕ್ಷೇತ್ರಕ್ಕೆ ತನ್ನದೇ ಆದ ನಿಲುವುಗಳನ್ನು ಕೊಟ್ಟ ಮಾಜಿ ಉಪ ಪ್ರಧಾನಿ ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಬೆಂಗಳೂರು ಹೊರ ವರ್ತಲ ರಸ್ತೆಯಲ್ಲಿರುವ ಮಾಗಡಿ ರಸ್ತೆಯ ಸುಗ್ಗನಹಳ್ಳಿ ಸರ್ಕಲ್ ನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದ ಬಳಿ ಸಂಶೋಧನ ಕೇಂದ್ರ ಉದ್ಘಾಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳ ಮುಖಂಡರುಗಳು ಉದ್ಘಾಟನಾ ಸಮಾರಂಭಕ್ಕೆ ತೆರಳಿದ ಹಿನ್ನೆಲೆಯಲ್ಲಿ ನಗರದ ಎಂ ಜಿ ರಸ್ತೆಯ ಅಂಬೇಡ್ಕರ್ ಭವನದ ಬಳಿ ಹಸಿರು…
ಬಿಜೆಪಿ ನಾಯಕರ ಹೋರಾಟ ತಡೆದ ಸರ್ಕಾರದ ಕ್ರಮಕ್ಕೆ ಖಂಡನೆ
ರಸ್ತೆ ತಡೆದು ಧರಣಿ ನಡೆಸಿ ಬಿಜೆಪಿ ಮುಖಂಡರ ಆಕ್ರೋಶ ತುಮಕೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕರು, ಮುಖಂಡರನ್ನು ಪೊಲಿಸರು ಮಾರ್ಗ ಮಧ್ಯೆ ತಡೆದು ಅವರನ್ನು ವಶಕ್ಕೆ ಪಡೆದ ಕ್ರಮ ಖಂಡಿಸಿ ಶುಕ್ರವಾರ ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಬಿಜೆಪಿಯ ಪ್ರತಿಭಟನೆ ಹತ್ತಿಕ್ಕುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಗ್ರಾಮಾಂತರ ಕ್ಷೇತ್ರದ…
ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು : ಡಾ: ಜಿ. ಪರಮೇಶ್ವರ್
ತುಮಕೂರು: ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಹೊರವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಸ್ಥಳೀಯ ಆಡಳಿತವನ್ನು ಬಲಗೊಳಿಸಲು ಗ್ರಾಮ…