ಹಾಲಿ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡದಿದ್ದರೂ ಪರವಾಗಿಲ್ಲ ದ್ವೇಷದ ರಾಜಕಾರಣ ಮಾಡಬಾರದು ಮಾಜಿ ಶಾಸಕ ಎಂ.ವಿ.ವಿ ವೀರಭದ್ರಯ್ಯ

ಮದುಗಿರಿ: ಕಳೆದ ಒಂದುವರೆ ವರ್ಷದಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ, ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿ ಕ್ಷೇತ್ರದಲ್ಲಿ ಸುವ್ಯವಸ್ಥೆ ಕಾಪಾಡಿ ಎಂದು ಮಾಜಿ ಶಾಸಕ ಎಂ.ವಿ.ವಿ ವೀರಭದ್ರಯ್ಯ ತಿಳಿಸಿದರು.     ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಲಿ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡದಿದ್ದರೂ ಪರವಾಗಿಲ್ಲ ದ್ವೇಷದ ರಾಜಕಾರಣ ಮಾಡಬಾರದು, ದ್ವೇಷದ ರಾಜಕಾರಣದಿಂದ ಮನೆ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದ್ದು, 70ರಿಂದ 80 ಸ್ಥಳೀಯ ಸಂಸ್ಥೆ ಚುನಾವಣೆಗಳು ಇನ್ನು ಸಹ ನಡೆದಿಲ್ಲ…

Read More

ಜಲ್ ಜೀವನ್ ಮಿಷನ್ ಕಾಮಗಾರಿಯಲ್ಲಿ ಕಳಪೆ ಕಂಡುಬಂದರೆ ಕ್ರಮ: ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು: ಜಿಲ್ಲೆಯಲ್ಲಿ ಅನುಷ್ಟಾನಗೊಳ್ಳುತ್ತಿರುವ ಜಲ್‍ಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನೊಳಗೊಂಡ ತನಿಖಾ ತಂಡ ರಚಿಸುವಂತೆ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.   ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿಯವರ ಕನಸಿನ ಯೋಜನೆಯಾದ ಜಲ್ ಜೀವನ್ ಮಿಷನ್ ಯೋಜನೆ ಅನುಷ್ಟಾನಕ್ಕಾಗಿ ರಾಜ್ಯಕ್ಕೆ 7…

Read More

ಗ್ರಾಮಸ್ಥರ ಸಹಕಾರದಿಂದ ಚಿಂಪುಗಾನಹಳ್ಳಿ ಸರ್ಕಾರಿ ಶಾಲೆಗೆ ಬಂದ ಹೋಸತನ : ಡಾ.ಹನುಮಂತನಾಥ ಸ್ವಾಮೀಜಿ.

ತುಮಕೂರು: ಆಧುನಿಕ ಶಿಕ್ಷಣ ವ್ಯವಸ್ಥೆಯ ಭರಾಟೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ನಿಟ್ಟಿನಲ್ಲಿ ಅತ್ಯುನ್ನತ ಸೌಲಭ್ಯಗಳೂಳ್ಳ ಖಾಸಗಿ ಶಾಲೆಗಳಿಗೆ ಹೋಂದಿಕೊಳ್ಳುತ್ತಿರುವುದು ವಿಪರ್ಯಾಸವಾಗಿದ್ದು ಮತ್ತೊಂದು ಕಡೆ ಸರ್ಕಾರಿ ಶಾಲೆಗಳು ಅವನತಿಯತ್ತ ಸಾಗುತ್ತಿದೆ ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಒಗ್ಗೂಡುವಿಕೆಯಿಂದ ಸರ್ಕಾರಿ ಶಾಲೆಯಲ್ಲಿ ವಿಘ್ನ ನಿವಾರಕ ಗಣಪತಿಯ ವಿಗ್ರಹ ಪ್ರತಿಷ್ಠಾಪನೆ ಮಾಡುವ ಮೂಲಕ ಚಿಂಪುಗಾನಹಳ್ಳಿಯ ಗ್ರಾಮಸ್ಥರು ಸರ್ಕಾರಿ ಶಾಲೆಗೆ ವಿಷೇಶವಾಗಿ ಹೋಸ ಕಳೆ ತಂದು ಕೊಟ್ಟಿರುವುದು ಶ್ಲಾಘನೀಯವೆಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶ್ರೀ…

Read More

ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿಯಿಂದ ವಿಶೇಷವಾಗಿ ಮಕ್ಕಳೊಂದಿಗೆ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ತುಮಕೂರು : ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಅಗತ್ಯವಾದ ವಸ್ತುಗಳನ್ನು ಧೇಣಿಗೆಯಾಗಿ ನೀಡುವುದರ ಮೂಲಕ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿ ಗಮನ ಸೆಳೆದರು.       ತುಮಕೂರಿನ ದಿಬ್ಬೂರು ಬಡಾವಣೆಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿನ ಮಕ್ಕಳು ಮಧ್ಯಾಹ್ನ ಊಟಕ್ಕೆ ಉಪಯೋಗಿಸಲು ತಟ್ಟೆ, ಲೋಟಗಳು ಹಾಗೂ ಶೈಕ್ಷಣಿಕ ಪರಿಕರಗಳನ್ನು ಧೇಣಿಗೆಯಾಗಿ ನೀಡಿ ವಿಶಿಷ್ಠ ರೀತಿಯಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.     ಶಾಲೆಯಲ್ಲಿ ಧ್ವಜಾರೋಹಣ…

Read More

ಸಿಕೆ ಪುರ ಪಿಎಚ್‍ಸಿ.ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ : ವೈದಾಧಿಕಾರಿಗಳಿಗೆ ತರಾಟೆ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕು ಸಿಕೆಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ತಪಾಸಣಾ ಅಭಿಯಾನ ಯೋಜನೆ ಮತ್ತು ಗರ್ಭಿಣಿ ಮಹಿಳೆಯ ಸೀಮಂತ  ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಸಿಕೆಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ಇರುವಂತಹ ಅವ್ಯವಸ್ಥೆಯನ್ನು ಕಂಡು ತಾಲೂಕು ವೈದ್ಯಾಧಿಕಾರಿ ಡಾ.ಕಿರಣ್‍ಗೆ ತರಾಟೆಗೆ ತೆಗೆದುಕೊಂಡರು.     ಅಸ್ಪತ್ರೆಯಲ್ಲಿ ಉತ್ತಮ ಸೌಲಭ್ಯಗಳಿದ್ದರೂ ಜನರ ಸೇವೆ ಮಾಡುವುದಕ್ಕೆ ಏನಾಗಿದೆ? ಎಂದು ಕೋಪಗೊಂಡ ಅವರು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೆ…

Read More

ಸೆ.14ರಂದು ರಾಷ್ಟ್ರೀಯ ಲೋಕ್ ಆದಾಲತ್

ತುಮಕೂರು: ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಸೆಪ್ಟಂಬರ್ 14ರಂದು ರಾಷ್ಟ್ರೀಯ ಲೋಕ್ ಆದಾಲತ್ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು.     ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು…

Read More

ಮದ್ಯಪಾನ ಬಿಡಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರ ಸಹಕಾರಿ:ಡಾ||ಶ್ರೀ ಶಿವಾನಂದಶಿವಾಚಾರ್ಯಸ್ವಾಮೀಜಿ

ತುಮಕೂರು:ಮದ್ಯಪಾನ ಬಿಟ್ಟು ತಮ್ಮ ಕುಟುಂಬದ ಸದಸ್ಯರೊಂದಿಗೆ ಹೊಸ ಜೀವನ ಪ್ರಾರಂಭಿಸಿ,ಡಾ||ಡಿ.ವಿರೇಂದ್ರ ಹೆಗ್ಗಡೆರವರು ಸಮಾಜವನ್ನು ದೃಷ್ಟಿಯಲ್ಲಿಟ್ಟುಕೊಂಡು ಮದ್ಯ ಸೇವಿಸಿ ತಮ್ಮ ಜೀವನವನ್ನು ಹಾಳುಮಾಡಿಕೊಂಡ ಜನರನ್ನು ಒಂದೆಡೆ ಸೇರಿಸಿ 8 ದಿನಗಳ ಕಾಲ ಸಾರ್ವಜನಿಕರು,ದಾನಿಗಳ ಸಹಕಾರದೊಂದಿಗೆ ಶಿಬಿರ ಏರ್ಪಡಿಸಿ ಕುಡಿತವನ್ನು ಬಿಡಿಸಿ ಲಕ್ಷಾಂತರ ಜನರಿಗೆ ಉತ್ತಮ ಜೀವನವನ್ನು ಕಟ್ಟಿಕೊಟ್ಟವರು ಖಾವಂದರು,ಜೀವನದಲ್ಲಿ ಆರೋಗ್ಯವೇ ಭಾಗ್ಯ, ಎಲ್ಲರೂ ಸೇವಾ ಕಾರ್ಯಗಳನ್ನು ಸದಾ ಮಾಡುತ್ತಿರಿ,ಈ ಶಿಬಿರದಿಂದ ಮಾನಸಿಕವಾಗಿ ಪರಿವರ್ತನೆ ಆಗಿದ್ದೀರಿ ಈ ದೇಶಕ್ಕೆ ಆಸ್ತಿಯಾಗಿ ಉತ್ತಮ ಜೀವನವನ್ನು ನಡೆಸಿ ತಂದೆ ತಾಯಿಗೆ ಉತ್ತಮ ಮಗನಾಗಿ,ಹೆಂಡತಿಗೆ…

Read More

ದಲಿತರ ಕಾಲೋನಿಗಳನ್ನು ನಿರ್ಲಕ್ಷ್ಯ ಮಾಡಿರುವ ಸ್ಥಳೀಯ ಆಡಳಿತ ; ಎನ್.ಕೆ.ನಿಧಿಕುಮಾರ್

ತುಮಕೂರು : ತುಮಕೂರು ತಾಲ್ಲೂಕು, ಕಸಬಾ ಹೋಬಳಿ, ಕೊತ್ತಿಹಳ್ಳಿ ಗ್ರಾಮದಲ್ಲಿ ಚರಂಡಿ ನೀರು ಸರಾಗವಾಗಿ ಹೋಗದೇ ದಲಿತರ ಮನೆಗಳಿಗೆ ನುಗ್ಗುತ್ತಿರುವ ಪರಿಣಾಮ ಮಾರಣಾಂತಿಕ ಕಾಯಿಲೆಗಳಿಗೆ ಆಸ್ಪದ ನೀಡುತ್ತಿದೆ ಹಾಗೂ ಈ ಕುರಿತು ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು ಮೊದಲ್ಗೊಂಡು ಚುನಾಯಿತ ಪ್ರತಿನಿಧಿಗಳು ಸಹ ಗಮನಹರಿಸದೇ ದಲಿತರು ಎಂಬ ಕಾರಣಕ್ಕೆ ನಿರ್ಲಕ್ಷ್ಯವಹಿಸಿರುವುದನ್ನು ಗಮನಿಸಿ ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.   ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ತಾಲ್ಲೂಕು,…

Read More

10ಸಾವಿರ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಸಂಕಲ್ಪ – ಶುಭ ಕಲ್ಯಾಣ್

ತುಮಕೂರು: ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ತುಮಕೂರು ಆರೋಗ್ಯ ಅಭಿಯಾನದ ಅಂಗವಾಗಿ ಪ್ರಸಕ್ತ ವರ್ಷದಲ್ಲಿ 10,000 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳುವ ಸಂಕಲ್ಪ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದರು.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಹಮ್ಮಿಕೊಂಡಿದ್ದ ವಿಶೇಷ ಬೃಹತ್ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಶಿಬಿರದಲ್ಲಿ ಕಣ್ಣಿನ ಪೊರೆ ಸಮಸ್ಯೆ ಇರುವವರನ್ನು ಪತ್ತೆ…

Read More

30 ವರ್ಷದಿಂದ ಪೋಲಿಸ್ ಮಖ್ಯ ಪೆದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಸಿಗುವುದೆ ಮುಂಬಡ್ತಿ ಭಾಗ್ಯ

ರಾಜ್ಯ ರಾಜಧಾನಿಗೆ ಹತ್ತಿರ ಇರುವ ಜಿಲ್ಲೆ ಎಂದರೆ ತುಮಕೂರು ಈ ಜಿಲ್ಲೆಯನ್ನು ಕಲ್ಪತರ ನಾಡು ಎಂದು ಕರೆಯಲ್ಪಡುತ್ತದೆ ಅದೇ ರೀತಿಯಾಗಿ ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಷ್ಟೇ ಬೃಹದಾಕಾರವಾಗಿ ತುಮಕೂರು ಬೆಳೆಯುತ್ತಿದ್ದು ಈ ಜಿಲ್ಲೆಯು 11 ತಾಲೂಕುಗಳನ್ನು ಒಳಗೊಂಡಿದೆ ಬೆಂಗಳೂರಿಗೆ ಹತ್ತಿರವಾಗಿರುವ ಈ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಒಂದಲ್ಲ ಒಂದು ರೀತಿಯ ದೊಡ್ಡ ದೊಡ್ಡ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು ಅಷ್ಟೇ ಪ್ರಮಾಣದಲ್ಲಿ ತುಮಕೂರು ಜಿಲ್ಲೆಯಲ್ಲಿ ಜನಸಂಖ್ಯೆಯ ಪ್ರಮಾಣವು ಸಹ ಹೆಚ್ಚುತ್ತಿದ್ದು ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಇಂದಿನ ದಿನಮಾನಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ಹಲವಾರು…

Read More