ಜಿಲ್ಲಾ ಸುದ್ದಿಗಳು
ಮಾದಕ ವಸ್ತುಗಳು ವಿದ್ಯಾರ್ಥಿಗಳಿಗೆ ಮಾರಕ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ
ತುಮಕೂರು: ಮನುಷ್ಯನ ಜೀವನ ಮತ್ತು ವ್ಯಕ್ತಿತ್ವವನ್ನು ಹಾಳು ಮಾಡುವ ಮಾದಕ ವಸ್ತುಗಳಿಂದ ದೂರವಿರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ಡಾ: ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಹಾಗೂ ಅಚರ್ಡ್ ಮದ್ಯವರ್ಜನ ಮತ್ತು ಸಮಗ್ರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ…
ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಸಂಘದ ಸದಸ್ಯರ ಮಕ್ಕಳಿಗೆ “ಡಾ. ಜಿ. ಪರಮೇಶ್ವರ -ಕನ್ನಿಕಾ ಪರಮೇಶ್ವರ ಉನ್ನತ ಶಿಕ್ಷಣ ಪ್ರೋತ್ಸಾಹ ಧನ” ಯೋಜನೆಯಡಿ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ನಗರ ನಿವಾಸಿ ಪತ್ರಕರ್ತರಿಗೆ ಆರೋಗ್ಯ ವಿಮೆ ಕಾರ್ಡ್ ವಿತರಣಾ ಕಾರ್ಯಕ್ರಮ ನಗರದ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಭಾನುವಾರ ಮಧ್ಯಾಹ್ನ ೩:೩೦ಕ್ಕೆ ಅಯೋಜಿಸಲಾಗಿದೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಾ ಜಿ ಪರಮೇಶ್ವರ್ ಮಾನ್ಯ…
ಕರ್ತವ್ಯದಲ್ಲಿರದ ಡ್ಯೂಟಿ ಡಾಕ್ಟರ್ ಅವರಿಗೆ ಶೋಕಾಸ್ ನೋಟೀಸ್ ನಿಡುವಂತೆ – ಜಿಲ್ಲಾಧಿಕಾರಿಗಳ ಸೂಚನೆ
ತುಮಕೂರು: ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು ಎಲ್ಲಾ ಆಸ್ಪತ್ರೆಗಳಲ್ಲಿ 24 ಗಂಟೆಗಳ ಕಾಲವದಿಯಲ್ಲೂ ವೈದ್ಯರು ಲಭ್ಯವಿರಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಮೂಗನಾಯಕನಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕಿಂದು ಬೆಳ್ಳಂಬೆಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಆರೋಗ್ಯ ಕೇಂದ್ರದಲ್ಲಿ ಯಾವುದೇ ಡ್ಯೂಟಿ ಡಾಕ್ಟರ್ ಇಲ್ಲದಿರುವುದನ್ನು ಕಂಡು ಗರ್ಭಿಣಿಯರ ಹೆರಿಗೆ, ಮತ್ತಿತರ ತುರ್ತು ಸಂದರ್ಭಗಳಲ್ಲಿ ವೈದ್ಯರ ಉಪಸ್ಥಿತಿ ಅಗತ್ಯವಿರುತ್ತದೆ. ಕರ್ತವ್ಯದಲ್ಲಿರದ ಡ್ಯೂಟಿ ಡಾಕ್ಟರ್ ಅವರಿಗೆ ಶೋಕಾಸ್ ನೋಟೀಸ್ ನೀಡಲು ತಹಶೀಲ್ದಾರ್ ಆರತಿ…
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಸಕ ಎಸ್ ಆರ್ ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ಗುಬ್ಬಿ ಸುದ್ದಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಸಭೆಯನ್ನು ಶಾಸಕ ಎಸ್ ಆರ್ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಜುಲೈ 26 ರ ಮಧ್ಯಾಹ್ನ 03 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು. ಆಗಸ್ಟ್ 15 ರಂದು ನಡೆಯುವ ರಾಷ್ಟ್ರೀಯ ಹಬ್ಬ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅದ್ದೂರಿಯಾಗಿ ಆಚರಿಸುವ ಸಲುವಾಗಿ ಜುಲೈ 26 ರ ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ…
ಜಿಲ್ಲಾಧಿಕಾರಿಗಳಿಂದ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ
ತುಮಕೂರು: ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ವತಿಯಿಂದ ಅಂದಾಜು 107ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಅಂತಿಮ ಹಂತದಲ್ಲಿರುವ 30 ಎಂಎಲ್ಡಿ ತೃತೀಯ ಹಂತದ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಇಂದು ಪರಿಶೀಲಿಸಿದರು. ಸ್ಥಳದಲ್ಲಿದ್ದ ಕೆಐಎಡಿಬಿ ಕಾರ್ಯನಿರ್ವಾಹಕ ಇಂಜಿನಿಯರ್ ಲಕ್ಷ್ಮೀಶ್ ಮಾತನಾಡಿ, ತ್ಯಾಜ್ಯ ನೀರನ್ನು 2ನೇ ಹಂತದಲ್ಲಿ ಶುದ್ಧೀಕರಣಗೊಳಿಸಿ ಭೀಮಸಂದ್ರ ಕೆರೆಗೆ ಬಿಟ್ಟಿದ್ದು, ಸದರಿ ನೀರನ್ನು ವಸಂತ ನರಸಾಪುರ ಪ್ರದೇಶದಲ್ಲಿರುವ ತ್ಯಾಜ್ಯ…
ಜಿಲ್ಲೆಗೆ ಹೇಮಾವತಿ ನೀರು ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿಗಳು ಮನವಿ
ತುಮಕೂರು: ಹೇಮಾವತಿ ಜಲಾಶಯದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಕೆರೆ ಕೆಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ತುಮಕೂರು ಶಾಖಾ ಕಾಲುವೆಗೆ ನೀರು ಹರಿದಿದ್ದು, ತಿಪಟೂರು ತಾಲ್ಲೂಕು ಗಂಗನಘಟ್ಟವನ್ನು ತಲುಪಿದೆ. ಜಲಾಶಯದ ಒಳಹರಿವಿನ ಪ್ರಮಾಣ ಯಾವುದೇ ಸಮಯದಲ್ಲಾದರೂ ಏರಿಕೆಯಾಗುವ ಸಂಭವವಿದ್ದು, ಹೆಚ್ಚುವರಿ ನೀರನ್ನು ನಾಲೆಗೆ ಬಿಡುವುದರಿಂದ ಸಾರ್ವಜನಿಕರು ನಾಲೆಯ ಅಕ್ಕ-ಪಕ್ಕ ಸುಳಿದಾಡಬಾರದು ಹಾಗೂ ಈಜಲು, ಜಾನುವಾರುಗಳಿಗೆ ನೀರು ಕುಡಿಸಲು, ಬಟ್ಟೆ ಒಗೆಯಲು, ಮತ್ತಿತರ ಕಾರಣಗಳಿಗಾಗಿ ನಾಲೆ ಬಳಿಗೆ…
ಡೆಂಗ್ಯೂ ಉತ್ಪತ್ತಿ ಕೇಂದ್ರವಾದ ಜಿಲ್ಲಾಸ್ಪತ್ರೆ ಆರೋಗ್ಯ ಅಧಿಕಾರಿಗೆ ಜಿಲ್ಲಾಧಿಕಾರಿಗಳಿಂದ ತೀವ್ರ ತರಾಟೆ
ತುಮಕೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಬಳಿಯಿರುವ ಶೌಚಾಲಯದಲ್ಲಿ ರಾಶಿ ರಾಶಿ ಕಸದ ಮೂಟೆಯನ್ನು ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಈಗಿಂದೀಗಲೇ ಕಸದ ಮೂಟೆಯನ್ನು ತೆರವುಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಅಸ್ಗರ್ ಬೇಗ್ ಅವರಿಗೆ ಎಚ್ಚರಿಕೆ ನೀಡಿದರು. ಅವರು ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಡೆಂಗ್ಯು ಚಿಕಿತ್ಸಾ ವಿಭಾಗ, ನವಜಾತ ಶಿಶು ವಿಭಾಗ, ಹೆರಿಗೆ ಕೊಠಡಿ, ಮಹಿಳಾ ವಿಭಾಗ, ಪ್ರಸವಪೂರ್ವ ಆರೈಕೆ ಕೊಠಡಿ, ಆರ್ಒಪಿ ಕೊಠಡಿ, ಡಾಟಾ ಎಂಟ್ರಿ ಆಪರೇಟರ್ ಕೊಠಡಿ, ಮತ್ತಿತರ…
ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣೆ
ಗುಬ್ಬಿ ಸುದ್ದಿ ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಲಾಯಿತು. ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ’ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು. ಪೂಜೆ ಸಲ್ಲಿಸಿ ಮಾತನಾಡಿದ ಅವರು ‘ಹಡಪದ ಅಪ್ಪಣ್ಣ ಅವರು…
ತುಮಕೂರು ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ.
ಗೃಹ ಸಚಿವರ ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ ?.ನಕಲಿ ಕ್ಲಿನಿಕ್ ಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಗೃಹ ಸಚಿವರೇ ? ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು , ಕಣ್ಮುಚ್ಚಿ ಕುಳಿತಿರುವುದರ ಹಿಂದಿನ ಮರ್ಮವೇನು ಜಿಲ್ಲೆಯ ನಕಲಿ ವೈದ್ಯರ ಮೇಲೆ ಕ್ರಮ ಏಕೆ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದು ಇದಕ್ಕೆಲ್ಲ ಡಿ, ಎಚ್, ಓ, ರವರೆ ಉತ್ತರಿಸಬೇಕಾಗಿದೆ ವೈಧ್ಯ ದೇವೋಭವ ಎಂಬ…
ಗುತ್ತಿಗೆ ಆಧಾರದ ಅಡಿಯಲ್ಲಿ ನೇಮಕಗೊಂಡ ಸಿಬ್ಬಂದಿಗಳಿಂದ ಹಣ ವಸೂಲಿಗಿಳಿದ ಆರೋಗ್ಯ ಇಲಾಖೆ
ಡಿ ಹೆಚ್ ಓ ಸಾಹೇಬರೇ ಈ ಅಕ್ರಮಕ್ಕೆ ಕಡಿವಾಣ ಯಾವಾಗ ???? ತುಮಕೂರು ನಗರದ ಕೋತಿ ತೋಪಿನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗೆಂದು ಬರುವ ಸಾರ್ವಜನಿಕರಿಗೆ ಈ ಆರೋಗ್ಯ ಕೇಂದ್ರದಲ್ಲಿ ಬಿಪಿ ಪರೀಕ್ಷೆಗೆ ಹಣ ಕೊಡಬೇಕು ಮಧುಮೇಹ ಕಾಯಿಲೆಯ ರೋಗಿಗಳು ರಕ್ತಪರೀಕ್ಷೆ ಮಾಡಿಸಲು ಈ ಆರೋಗ್ಯ ಕೇಂದ್ರಕ್ಕೆ ಬಂದರೆ ಇಲ್ಲಿನ ಸಿಬ್ಬಂದಿಗಳು ಕೇಳಿದಷ್ಟು ಹಣ ನೀಡಬೇಕು ಇದು ಸರ್ಕಾರಿ ಆಸ್ಪತ್ರೆಯೋ ಅಥವಾ ಖಾಸಗಿ ಆಸ್ಪತ್ರೆಯೋ ಎಂಬ ಅನುಮಾನ ಇಲ್ಲಿನ ಸಾರ್ವಜನಿಕರಲ್ಲಿ ಗೊಂದಲ…