ಪ್ರಮುಖ ಸುದ್ದಿಗಳು
22ರಿಂದ ನಗರದಲ್ಲಿ ರಂಗ ದಸರಾ ನಾಟಕೋತ್ಸವ 11 ದಿನಗಳ ನಾಟಕೋತ್ಸವದಲ್ಲಿ 15 ನಾಟಕಗಳ ಪ್ರದರ್ಶನ
ತುಮಕೂರು: ದಸರಾ ಉತ್ಸವದ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಸಹಯೋಗದಲ್ಲಿ ಈ ತಿಂಗಳ 22ರಿಂದ 11 ದಿನಗಳ ಕಾಲ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಮಾಸ್ಟರ್ ಹಿರಣ್ಣಯ್ಯ ರಂಗವೇದಿಕೆಯಲ್ಲಿ ತುಮಕೂರು ರಂಗ ದಸರಾ ನಾಟಕೋತ್ಸವ ಏರ್ಪಾಟಾಗಿದೆ. ಈ ಸಂಬಂಧ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ವೈ.ಎನ್.ಶಿವಣ್ಣನವರ ಅಧ್ಯಕ್ಷತೆಯಲ್ಲಿ ಕಲಾವಿದರು ಶನಿವಾರ ಸಭೆ ಸೇರಿ ಕಾರ್ಯಕ್ರಮಗಳ ಸಿದ್ಧತೆ ಕುರಿತು ಚರ್ಚೆ ನಡೆಸಿದರು. ಹಿರಿಯ ಕಲಾವಿದ ಎಂ.ವಿ.ನಾಗಣ್ಣ ಮಾತನಾಡಿ, ಇದೇ ಮೊದಲ ಬಾರಿಗೆ…
ವೈಸಿರಿ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ವಿಶೇಷ ಉಪನ್ಯಾಸ
ತುಮಕೂರು, : ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಪ್ರಜ್ಞಾವಂತ ಜನರೇ ಸೈಬರ್ ಅಪರಾಧ ವಂಚನೆಗಳಿಗೆ ಬಲಿಯಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಅಥವಾ ಆನ್ಲೈನ್ನಲ್ಲಿ ಯಾವುದೇ ವಿಚಾರವನ್ನು ಹುಡುಕುವಾಗ ಎಚ್ಚರಿಕೆಯಿಂದಿರಬೇಕು. ಇಲ್ಲದಿದ್ದರೆ ಸೈಬರ್ ವಂಚಕರ ಮೋಸದ ಬಲೆಗೆ ಬೀಳುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಎಸ್ಇಎ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಸಿಎಸ್ಇ ವಿಭಾಗದ ಮುಖ್ಯಸ್ಥರಾದ ಡಾ. ಕೃಷ್ಣಕುಮಾರ್ ಪಿ.ಆರ್ ಅವರು ಹೇಳಿದರು. ನಗರದ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್…
ಉಪಪಂಗಡ ಹಲವಿದ್ದರೂ ಒಕ್ಕಲಿಗರೆಲ್ಲಾ ಒಂದೇ’ ಜಾತಿ ಜನಗಣತಿಯಲ್ಲಿ ಒಕ್ಕಲಿಗ ಎಂದು ನಮೂದಿಸಲು ಸ್ವಾಮೀಜಿಗಳ ಕರೆ
ತುಮಕೂರು: ಜಾತಿ ಜನಗಣತಿ ಸಂದರ್ಭದಲ್ಲಿ ಎಲ್ಲಾ ಒಕ್ಕಲಿಗರ ಉಪ ಪಂಗಡಗಳನ್ನು ಬಿಟ್ಟು ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು ನಮೂದಿಸಬೇಕು. ಆ ಮೂಲಕ ಒಕ್ಕಲಿಗರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸರ್ಕಾರದಿಂದ ಹಕ್ಕು, ಸೌಕರ್ಯ ಪಡೆಯಲು ಒಕ್ಕಲಿಗರು ಸಂಘಟಿತರಾಗಿ ಜಾಗೃತರಾಗಬೇಕು ಎಂದು ಒಕ್ಕಲಿಗ ಸಮಾಜದ ಸ್ವಾಮೀಜಿಗಳು, ವಿವಿಧ ಮುಖಂಡರು ಮನವಿ ಮಾಡಿದರು. ಕೇಂದ್ರ ಒಕ್ಕಲಿಗರ ಸಂಘ ಹಾಗೂ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ನಗರದ ಕುಂಚಿಟಿಗ ಸಮುದಾಯ ಭವನದಲ್ಲಿ ಗುರರುವಾರ ಹಮ್ಮಿಕೊಂಡಿದ್ದ ಒಕ್ಕಲಿಗರ ಜಾತಿ ಜನಗಣತಿ ಜಾಗೃತಿ ಸಭೆಯಲ್ಲಿ ಮಾತನಾಡಿದ…
ಪ್ರಧಾನಿ ಮೋದಿಯವರ ಜನ್ಮದಿನಾಚರಣೆ: ಆರೋಗ್ಯ ಶಿಬಿರ, ಮಕ್ಕಳಿಗೆ ಪುಸ್ತಕ ವಿತರಣೆ, ಗಿಡ ನೆಡುವ ಕಾರ್ಯಕ್ರಮ
ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮದಿನಾಚರಣೆ ಅಂಗವಾಗಿ ಈ ತಿಂಗಳ 17ರಂದು ಬುಧವಾರ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ನಗರದಲ್ಲಿ ವಿವಿಧ ಸಮಾಜ ಸೇವಾ ಹಾಗೂ ಆರೋಗ್ಯ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶ್ವ ನಾಯಕ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲ, ಜಗತ್ತಿನ ವಿವಿಧ ದೇಶಗಳಲ್ಲೂ ಆಚರಣೆ ಮಾಡಲಾಗುತ್ತಿದೆ. ಹಬ್ಬದ ರೀತಿಯಲ್ಲಿ ಮೋದಿಯವರ ಜನ್ಮದಿನವನ್ನು ಆಚರಣೆ ಮಾಡಲಾಗುತ್ತದೆ. ಬೆಳಿಗ್ಗೆ 9.30ಕ್ಕೆ ನಗರದ ಸಂಸದರ ಕಚೇರಿ…
ನಿರೂಪಕರ ಜ್ಞಾನಮಟ್ಟದಿಂದ ಆ ಸುದ್ದಿವಾಹಿನಿಯ ಘನತೆ ನಿರ್ಧಾರವಾಗಿರುತ್ತದೆ” ಡಾ”ಎಂ, ಎಸ್, ರವಿಪ್ರಕಾಶ್
ತುಮಕೂರು: ನಿರುಪಕರು ಒಂದು ಟಿವಿ ವಾಹಿನಿಯ ಪ್ರತಿನಿಧಿಯಂತೆ ಇದ್ದು ಸಮಾಜದಲ್ಲಿನ ಒಳಿತು ಕೆಡಕುಗಳ ಸುದ್ದಿಗಳನ್ನು ಜನರಿಗೆ ಮನಮುಟ್ಟುವಂತೆ ವಿವರಿಸುವಂತಹ ಕಾರ್ಯವನ್ನು ನಿರ್ವಹಿಸುತ್ತಾರೆ. ಇವರ ಜ್ಞಾನಮಟ್ಟದಿಂದ ಆ ವಾಹಿನಿಯ ಘನತೆ ನಿರ್ಧಾರವಾಗಿರುತ್ತದೆ ಎಂದು ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ್ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಿಂದ ಆಯೋಜಿಸಲಾಗಿದ್ದ 3 ದಿನಗಳ ಆ್ಯಂಕರಿಂಗ್ – ಸುದ್ದಿ ನಿರೂಪಣಾ ಕಾರ್ಯಗಾರವನ್ನು ಉಧ್ಘಾಟಿಸಿ ಮಾತನಾಡಿದ ಅವರು…
ಸಂವಿಧಾನದ ಆಶಯವನ್ನು ಭಾರತದ ಪ್ರತಿಯೊಬ್ಬ ವ್ಯಕ್ತಿಯೂ ಅರಿಯಬೇಕುಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು
ತುಮಕೂರು: ಸಂವಿಧಾನದ ಆಶಯಗಳನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಅರಿತುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವವು ಕೇವಲ ಮತದಾನಕ್ಕೆ ಸೀಮಿತವಾಗಿರದೆ, ಜನಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಒತ್ತಿ ಹೇಳುತ್ತದೆ. ಪ್ರತೀ ನಾಗರಿಕನೂ ಪ್ರಜಾಪ್ರಭುತ್ವದ ಬಲವರ್ಧನೆಗೆ ತನ್ನ ಪಾತ್ರವನ್ನು ನಿರ್ವಹಿಸಬೇಕು ಎಂದು ಹೇಳಿದರು….
2006 ರಿಂದ 2009 ನೇ ಸಾಲಿನ ಬಿ.ಬಿ.ಎಂ. ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮಾಗಮ ಕಾರ್ಯಕ್ರಮ
ತುಮಕೂರು : ಪಾವಗಡ ತಾಲ್ಲೂಕಿನ ಶ್ರೀಮತಿ ಮತ್ತು ಶ್ರೀ ವೈ.ಇ.ಆರ್. ಪ್ರಥಮ ದರ್ಜೆ ಕಾಲೇಜಿನ 2006 ರಿಂದ 2009 ನೇ ಸಾಲಿನ ಬಿ.ಬಿ.ಎಂ. ವಿದ್ಯಾರ್ಥಿಗಳಿಂದ 16 ವರ್ಷಗಳ ನಂತರ ಗುರುವಂದನೆ ಹಾಗೂ ಸ್ನೇಹ ಸಮಾಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗುರುಗಳಿಗೆ ವಿಶೇಷ ಪುಷ್ಪನಮನ, ಪುಷ್ಪದಿಂದಲೇ ಅವರುಗಳನ್ನು ವೇದಿಕೆಯವರೆಗೆ ಭವ್ಯ ಸ್ವಾಗತವನ್ನು ನೀಡುವುದರ ಮೂಲಕ ವಿದ್ಯೆ ಕಲಿಸಿದ ಗುರುಗಳಿಗೆ ವಿಶೇಷ ಗೌರವವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹೆಚ್.ಓ.ಡಿ ಆದ ಮಹಾಲಕ್ಷ್ಮೀ ಅವರು ವಹಿಸಿದ್ದರು. …
ಹೇಮಾವತಿ ಲಿಂಕ್ ಕೆನಾಲ್ : ರೈತರಿಗೆ ಆತಂಕ ಬೇಡ – ಡಿ.ಕೆ.ಶಿವಕುಮಾರ್ ಅಭಯ
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆಯ ಬಗ್ಗೆ ತುಮಕೂರು ಜಿಲ್ಲೆಯ ಯೋಜನೆ ವ್ಯಾಪ್ತಿ ಪ್ರದೇಶದ ರೈತರು ಗಾಬರಿಪಡುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಣ್ಣ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ರೈತರಿಗೆ ಭರವಸೆ ನೀಡಿದ್ದಾರೆ. ಗುಬ್ಬಿ ತಾಲೂಕಿನ ಸುಂಕಾಪುರದ ಟಿ.ಬಿ. ಕೆನಾಲ್ 70ನೇ ಕಿ.ಮೀ.ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯ ಪರಿವೀಕ್ಷಣೆ ನಡೆಸಿದ ನಂತರ ಅವರು ಮಾತನಾಡಿದರು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ತತ್ವದಲ್ಲಿ ನಮ್ಮ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ ಕೈಗೆತ್ತಿಳ್ಳಲಾಗಿರುವ ಹೇಮಾವತಿ ಲಿಂಕ್…
ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ: ಸಾಧಕರಿಗೆ ಸನ್ಮಾನ
ತುಮಕೂರು: ಶಿಕ್ಷಕರು ಕೇವಲ ಶೈಕ್ಷಣಿಕ ಜ್ಞಾನವನ್ನು ನೀಡುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ, ಉತ್ತಮ ಮನುಷ್ಯರಾಗಿ ಮತ್ತು ದೇಶದ ಉತ್ತಮ ನಾಗರಿಕರಾಗಿ ಬೆಳೆಯಲು ಸಹಕರಿಸುತ್ತಾರೆ. ರಾಷ್ಟ್ರ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಅವರು ಅಭಿಪ್ರಾಯಪಟ್ಟರು. ನಗರದ ಹೊರವಲಯದ ಅಗಳಕೋಟೆಯ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ‘ಸಾಧಕ ಶಿಕ್ಷಕನ್ನು’ ಸನ್ಮಾಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದೇಶದ ಪ್ರಜೆಗಳಾಗಿರುವುದರಿಂದ ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವ ಪ್ರಮುಖ ಪಾತ್ರವನ್ನು ವಹಿಸುತ್ತಾರೆ….
ಜಿಎಸ್ಟಿ ದರ ಪರಿಷ್ಕರಣೆ: ಬಿಜೆಪಿ ಸ್ವಾಗತ
ತುಮಕೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದರಗಳನ್ನು ಪರಿಷ್ಕರಿಸುವ ಮೂಲಕ ತೆರಿಗೆ ಹೊರೆ ಕಡಿತಗೊಳಿಸಿ ಎಲ್ಲಾ ವರ್ಗದ ಜನರ ಬದುಕನ್ನು ಸರಳ ಹಾಗೂ ಸುಲಭಗೊಳಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಟಿ.ಆರ್.ಸದಾಶಿವಯ್ಯ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಜಿಎಸ್ಟಿ ಪರಿಷ್ಕರಣೆ ಜನಸಾನ್ಯರ ತೆರಿಗೆ ಹೊರೆ ಇಳಿಸುವ ಮೂಲಕ ಕೇಂದ್ರ ಸರ್ಕಾರ ಗರಿಷ್ಠ ವಸ್ತುಗಳ ಮೇಲೆ ಗಮನಾರ್ಹ ಪರಿಹಾರವನ್ನು ನೀಡಿದೆ. ರೈತರು, ವ್ಯಾಪಾರಿಗಳು ಮತ್ತು ವ್ಯವಹಾರಗಳಿಗೆ ಇದರಿಂದ ಪ್ರಯೋಜನವಾಗಿದೆ….