
ಪ್ರಮುಖ ಸುದ್ದಿಗಳು
ಸ್ವಉದ್ಯೋಗ ಮಾಡುವುದರಿಂದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣರಾಗಬಹುದು ಎಂದು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗೀತಾ ತಿಳಿಸಿದರು.
ಗುಬ್ಬಿ : ತಾಲೂಕಿನ ಹೊಸಕೆರೆ ವಲಯದ ಅರೇ ಹಳ್ಳಿ ಕಾರ್ಯಕ್ಷೇತ್ರದ ಉಗಮ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣ ಶಿಬಿರವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು ಮಹಿಳೆಯರು ಸ್ವಾವಲಂಬಿ ಆಗಬೇಕೆಂದು ತಿಳಿಸಿದರು. ತುಮಕೂರು ಜಿಲ್ಲೆಯ ನೀರು ಉಳಿಸಿ ಕಾರ್ಯಕ್ರಮದ ಮೇಲ್ವಿಚಾರಕ ಕೇಶವ ಮೂರ್ತಿ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಪರಿಚಯ ಹಾಗೂ ನೀರು ಉಳಿಸಿ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಿದರು. ಅನಿತಾ ಮಾತನಾಡಿ ಸ್ವ ಉದ್ಯೋಗ ಯಾಕೆ ಮಾಡಬೇಕು, ಸ್ವ ಉದ್ಯೋಗದಿಂದ…
ಸಾರ್ವಜನಿಕರ ಹಿತಕ್ಕಾಗಿ ಯೋಗ ತರಗತಿಗಳನ್ನು ನಡೆಸಲು ಸಿದ್ಧವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ.
ಗುಬ್ಬಿ : ಪ್ರತಿನಿತ್ಯ ಯೋಗಾಭ್ಯಾಸಕ್ಕಾಗಿ ಕನಿಷ್ಠ ಸಮಯವನ್ನು ಮೀಸಲಿಟ್ಟಲ್ಲಿ ಉತ್ತಮ ಆರೋಗ್ಯ ಹಾಗೂ ಮಾನಶಾಂತಿಯನ್ನು ಪಡೆಯಲು ಸಾಧ್ಯವಾಗುವುದು.ಪತಂಜಲಿ ಯೋಗ ಸಂಸ್ಥೆಯು ಸಾರ್ವಜನಿಕರ ಹಿತಕ್ಕಾಗಿ ಯೋಗ ತರಗತಿಗಳನ್ನು ನಡೆಸಲು ಸಿದ್ಧವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ. ತಿಳಿಸಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ವಿವಿಧ ಸಂಘಗಳ…
ಶ್ರೀ ಮಾರಿಯಮ್ಮದೇವಿ 61ನೇ ವರ್ಷದ ಅದ್ದೂರಿ ಜಾತ್ರಾ ಮಹೋತ್ಸವ
ತುಮಕೂರು ನಗರದ ಹೃದಯ ಭಾಗದಲ್ಲಿರುವ ಮಾರಿಯಮ್ಮ ನಗರ ಬಾಳನಕಟ್ಟೆ, ಮಂಡಿಪೇಟೆಯ ಮಾರಿಯಮ್ಮ ದೇವಿ ತಾಯಿಯ ಜಾತ್ರಾ ಮಹೋತ್ಸವವನ್ನು ಮಾರಿಯಮ್ಮ ಯುವಕ ಸಂಘದಿಂದ 61ನೇ ವರ್ಷದ ಜಾತ್ರಾ ಮಹೋತ್ಸವನ್ನು ದಿನಾಂಕ:25-6-2024 ಮಂಗಳವಾರ ದಿಂದ ದಿನಾಂಕ:27-6-2024 ಗುರುವಾರದರವರಗೆ ಹಮ್ಮಿಕೊಳ್ಳಲಾಗಿದೆ. ಈ ಜಾತ್ರಾ ಮಹೋತ್ಸವದ ಮೊದಲನೇ ದಿನ ಅಂದರೇ ದಿನಾಂಕ:25-6-2024 ಮಂಗಳವಾರ ಬೆಳಗ್ಗೆ 7 ಗಂಟೆಗೆ ಕರಗವನ್ನು ಅಮಾನಿಕೆರೆಯಿಂದ ಪೂಜಿಸಿ ಮೆರವಣಿಗೆಯೊಂದಿಗೆ ಅಂಬಲಿ ಸೇವೆಯನ್ನು ನಡೆಸಿ, ದಿನಾಂಕ:26-6-2024 ಬುಧವಾರ ಮಧ್ಯಾಹ್ನ 1:30ಕ್ಕೆ ನಗರದ ರಾಜಬೀದಿಗಳಾದ ಮಂಡಿಪೇಟೆ,…
ಸಾಮರ್ಥ್ಯ ಅಭಿವೃದ್ಧಿ ತರಭೇತಿ ಕಾರ್ಯಗಾರಕ್ಕೆ ತಾ.ಪಂ ಇಓ ಪರಮೇಶ್ ಕುಮಾರ್ ಚಾಲನೆ
ಗುಬ್ಬಿ ಸುದ್ದಿ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನೆ ಸಂಸ್ಥೆಯು ಕಳೆದ ಒಂದು ದಶಕದಿಂದ ರಾಜ್ಯದಲ್ಲಿ ಗ್ರಾಮೀಣ ಬಡ ಮತ್ತು ದುರ್ಬಲ ವರ್ಗದ ಮಹಿಳೆಯರಿಗೆ ಸ್ವಸಹಾಯ ಗುಂಪುಗಳು, ವಾರ್ಡ್, ಗ್ರಾಮ ಮತ್ತು ತಾಲ್ಲೂಕು ಪಂಚಾಯಿತಿ ಮಟ್ಟದ ಒಕ್ಕೂಟಗಳು, ವಿವಿಧ ಉತ್ಪಾದಕರ ಗುಂಪುಗಳಂತಹ ಸಮುದಾಯ ಆಧಾರಿತ ಸಂಸ್ಥೆಗಳನ್ನು ರಚಿಸಿಸುವ ಮೂಲಕ ಗಮನಾರ್ಹ ಸಾಧನೆಗಳನ್ನು ಮಾಡಿದೆ. ಈವರೆಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ…
ಆರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ/ ಶೀಘ್ರ ಬಿಜೆಪಿ, ಜೆಡಿಎಸ್ ಸರ್ಕಾರ ಅಧಿಕಾರಕ್ಕೆ: ಮಸಾಲಾ ಜಯರಾಮ್ ಭವಿಷ್ಯ
ತುರುವೇಕೆರೆ: ಮುಂದಿನ ಆರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಭವಿಷ್ಯ ನುಡಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ನಡೆಸಿದ ರಸ್ತೆ ತಡೆ, ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದ ಕಾಂಗ್ರೆಸ್ ಪಕ್ಷ, ಅಧಿಕಾರಕ್ಕೆ ಬಂದ ಮೇಲೆ…
ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಸಮೀಕ್ಷೆ ಕುರಿತ ಪ್ರಚಾರ ಅಭಿಯಾನಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆ:
ತುರುವೇಕೆರೆ: ಪ್ರಧಾನ ಮಂತ್ರಿ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಸಮೀಕ್ಷೆ ಕುರಿತ ಪ್ರಚಾರ ಅಭಿಯಾನಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ಎಂ.ಟಿ.ಕೃಷ್ಣಪ್ಪ, ರೈತರ ಹಿತ ಕಾಪಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿದೆ. ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯನ್ನು ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ…
ಜೂ.24 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 : ತ್ರಿಸದಸ್ಯ ಸಮಿತಿ ರಚನೆ
ತುಮಕೂರು: ಜಿಲ್ಲೆಯಲ್ಲಿ ಜೂನ್ 24 ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ನ್ನು ವ್ಯವಸ್ಥಿತವಾಗಿ ನಡೆಸುವ ದೃಷ್ಟಿಯಿಂದ ಪರೀಕ್ಷಾ ಕಾರ್ಯ ಮತ್ತು ತಾಂತ್ರಿಕ ಕಾರ್ಯಗಳ ನಿರ್ವಹಣೆಗೆ ತ್ರಿಸದಸ್ಯ ಸಮಿತಿಯನ್ನು ರಚಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪರೀಕ್ಷೆಗೆ ನೋಂದಣಿಯಾದ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಪಡೆದು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್, ಆರೋಗ್ಯ ಕಾರ್ಯಕರ್ತರ…
ಸರ್ಕಾರಿ ಕಾರ್ಯಕ್ರಮಗಳ ಯಶಸ್ವಿಗೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ
ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಿದಾಗ ಸರ್ಕಾರಿ ಕಾರ್ಯಕ್ರಮಗಳ ಯಶಸ್ವಿ ಸಾಧ್ಯ: ಶುಭ ಕಲ್ಯಾಣ್ ತುಮಕೂರು: ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರಿ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಟಾನ ಗೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಕೋರ ಹೋಬಳಿ ಮುದ್ದೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ಆಡಳಿತವನ್ನು ಜನರ ಬಳಿ ತಂದು ಜನರ ಸಮಸ್ಯೆಗಳನ್ನು ಪರಿಹರಿಸುವುದೇ ಜನ ಸ್ಪಂದನ ಕಾರ್ಯಕ್ರಮದ ಉದ್ದೇಶವಾಗಿದ್ದು,…
ಸಾರ್ವಜನಿಕರಿಗೆ ಅಗತ್ಯವಿರುವ ಬಸ್ ಸೌಕರ್ಯ ಕಲ್ಪಿಸುವ ಗುರಿ ಎಸ್ ಆರ್ ಶ್ರೀನಿವಾಸ್
ಗುಬ್ಬಿ ಪಟ್ಟಣದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಬಸ್ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಶಾಸಕ ಎಸ್ ಆರ್ ಶ್ರೀನಿವಾಸ್ ರವರು ಕೆ ಎಸ್ ಆರ್ ಟಿ ಸಿ ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಬಸ್ ನಿಲ್ದಾಣಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಟ್ಟಣದ ಬಸ್ ನಿಲ್ದಾಣದಲ್ಲಿ ಇರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸುವಂತೆ ಅಧಿಕಾರಿಗೆ ತಿಳಿಸಲಾಗಿದೆ. ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು…
ಜನಸ್ನೇಹಿಯಾಗಿ ಅಧಿಕಾರಿಗಳು ಕೆಲಸ ಮಾಡಬೇಕು ಜಿಲ್ಲಾಧಿಕಾರಿ ಶುಭ ಕಲ್ಯಾಣ್ . ಜಿಲ್ಲಾಧಿಕಾರಿ ಶುಭಕಲ್ಯಾಣ
ಗುಬ್ಬಿ, ಸುದ್ದಿ : ಸಾರ್ವಜನಿಕರು, ರೈತರಿಂದ ಬರುವ ಕುಂದುಕೊರೆತೆಯ ಅರ್ಜಿಗಳನ್ನು ಅಧಿಕಾರಿಗಳು ಶೀಘ್ರವಾಗಿ ವಿಲೇವಾರಿ ಮಾಡದೆ ಹೋದರೆ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಎಚ್ಚರಿಸಿದರು. ಪಟ್ಟಣದ ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮ ಮಟ್ಟದಲ್ಲಿ ವಿಎ ಮತ್ತು ಆರ್ ಐ ಗಳು ರೈತರ ಸಮಸ್ಯೆಗಳನ್ನು ಕಾಲಮಿತಿ ಒಳಗೆ ಪರಿಹರಿಸಬೇಕು. ಜನಸ್ನೇಹಿಯಾಗಿ ಅಧಿಕಾರಿಗಳು ಕೆಲಸ ಮಾಡಬೇಕು. ಕಂದಾಯ…