ಪ್ರಮುಖ ಸುದ್ದಿಗಳು
ಶಾಲಾ-ಕಾಲೇಜುಗಳ ಆವರಣ ಸ್ವಚ್ಛವಾಗಿಡಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
ತುಮಕೂರು : ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಹಗಲು ಹೊತ್ತಿನಲ್ಲಿ ರೋಗಗಳನ್ನು ಹರಡುವಂತಹ ಸೊಳ್ಳೆಗಳ ಕಡಿತದಿಂದ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವ ಕಾರಣ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳ ಕೊಠಡಿಗಳನ್ನು ಪರಿಶೀಲಿಸಿ ಸ್ವಚ್ಛತೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ನಡೆದ ‘ಮುಂಗಾರು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು…
ಶ್ರೀ ಕಾರದೇಶ್ವರ ಶ್ರೀ ಬೆಳ್ಳಾವಿ ಮಠದ ವತಿಯಿಂದ ಬಡ ಮತ್ತು ಅನಾಥ ಮಕ್ಕಳಿಗೆ, ವಿಧ್ಯಾಬ್ಯಾಸಕ್ಕಾಗಿ ದಾಖಲಾತಿ ಪ್ರಾರಂಭ
ಶ್ರೀ ಕಾರದೇಶ್ವರ ಶ್ರೀ ಬೆಳ್ಳಾವಿ ಮಠದ ವತಿಯಿಂದ ಬಡ ಮತ್ತು ಅನಾಥ ಮಕ್ಕಳಿಗೆ, ವಿಧ್ಯಾಬ್ಯಾಸಕ್ಕಾಗಿ ದಾಖಲಾತಿ ಪ್ರಾರಂಭ 2024-25 ನೇ ಸಾಲಿನ ವಿದ್ಯಾಭ್ಯಾಸಕ್ಕಾಗಿ *ಶ್ರೀ ಕಾರದೇಶ್ವರ ಶ್ರೀ ಬೆಳ್ಳಾವಿ ಮಠದ ವತಿಯಿಂದ ಬಡ ಮತ್ತು ಅನಾಥ ಮಕ್ಕಳ, ವಿಧ್ಯಾಬ್ಯಾಸಕ್ಕಾಗಿ *5ನೇ ತರಗತಿಯಿಂದ ಪಿಯುಸಿವರೆಗೆ #ಸರ್ಕಾರಿ ಶಾಲೆ ಕನ್ನಡ ಮಾಧ್ಯಮದಲ್ಲಿ ಉಚಿತ ದಾಖಲಾತಿ ಪ್ರಾರಂಭವಾಗಿದ್ದು ಹಾಗೂ ಶ್ರೀ ಮಠದಲ್ಲಿ ಉಚಿತ ಊಟ,ಉಚಿತ ವಸತಿ ನಿಲಯದ ವ್ಯವಸ್ಥೆ ಇದ್ಧು* ಉಚಿತ ಪೆನ್ನು ಪುಸ್ತಕಗಳ ಸೌಲಭ್ಯದ ಜ್ಯೋತೆಗೆ (ಓದಲು,…
ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಲೋಕೇಶ್ವರ್
ಗುಬ್ಬಿ: ಪೋಷಕರು ತಮ್ಮ ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿದರೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಯಾಗಲು ಸಾಧ್ಯವಾಗುವುದು ಎಂದು ಖೋ ಖೋ ಫೆಡರೇಶನ್ ರಾಜ್ಯಘಟಕದ ಅಧ್ಯಕ್ಷರಾದ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷರಾದ ಲೋಕೇಶ್ವರ್ ತಿಳಿಸಿದರು. ಭಾನುವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಮಕ್ಕಳ ಖೋಖೋ ಮತ್ತು ವಾಲಿಬಾಲ್ ಆಟಗಳ ತರಬೇತಿ ಹಾಗೂ ಬೇಸಿಗೆ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಅವರು ಖೋ ಖೋ ಆಟವು ಅಂತರಾಷ್ಟ್ರೀಯ ಕ್ರೀಡೆಯಾಗಿ ರೂಪಗೊಂಡಿದೆ. ಖೋ…
ಸುಗಮ ಮತ ಎಣಿಕಾ ಕಾರ್ಯಕ್ಕೆ ಸಕಲ ಸಿದ್ಧತೆ-ಜಿಲ್ಲಾಧಿಕಾರಿ
ತುಮಕೂರು: ಜಿಲ್ಲೆಯಲ್ಲಿ ಕಳೆದ ಏಪ್ರಿಲ್ 26ರಂದು ಜರುಗಿದ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4ರಂದು ಸುಗಮವಾಗಿ ಮತ ಎಣಿಕಾ ಕಾರ್ಯ ನಡೆಸಲು ಎಣಿಕಾ ಕೊಠಡಿ, ಎಣಿಕಾ ಟೇಬಲ್, ಅಗತ್ಯ ಅಧಿಕಾರಿ/ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡ ಅವರು ಜಿಲ್ಲೆಯ ಲೋಕಸಭಾ…
ನ್ಯಾಯಾಧೀಶರಿಂದ ಕಾನೂನು ಅರಿವು ಕಾರ್ಯಕ್ರಮ
ತಿಪಟೂರು. ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ತಿಪಟೂರು(ರಿ), ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ, ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ಬಾಲಕಾರ್ಮಿಕ ನಿರ್ಮೂಲನ ಅಭಿಯಾನದ ಉದ್ಘಾಟನಾ ಸಮಾರಂಭವನ್ನು ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಕಾನೂನು ಸೇವಾ ಸಮಿತಿಯ ವಿ.ದೀಪಾ ರವರು ವಿದ್ಯಾರ್ಥಿಗಳನ್ನು ತನ್ನತ್ತ ಸೆಳೆಯುತ್ತಾ,ಬಾಲ ಕಾರ್ಮಿಕ ನಿರ್ಮೂಲನೆಯ ಬಗ್ಗೆ ಒಂದಷ್ಟು ಕಾನೂನು ಅರಿವು…
ಹನುಮ ಜಯಂತಿ ಅಂಗವಾಗಿ ವಿಶೇಷ ಅಲಂಕಾರ
ತಿಪಟೂರು : ನಗರದ ವ್ಯಾಸರಾಜ ಪ್ರತಿಷ್ಠಾಪಿತ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶನಿವಾರ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ಮತ್ತು ಪವಮಾನ ಸೂಕ್ತ ಪಾರಾಯಣ ನೆರವೇರಿತು.ವ್ಯಾಸರಾಜ ಪ್ರತಿಷ್ಠಾಪಿತ ಕೋಟೆ ಆಂಜನೇಯ ಸ್ವಾಮಿಯವರಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗವನ್ನು ಮಾಡಲಾಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳ ಆಗಮಿಸಿ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾದರು.
ಮಿಣಸಂದ್ರ ಗ್ರಾಮದಲ್ಲಿ ಮಾರಮ್ಮ ದೇವಿ ನೂತನ ದೇವಾಲಯ ಉದ್ಘಾಟನೆ”
ಕೊರಟಗೆರೆ: ತಾಲೋಕಿನ ಕೋಳಾಲ ಹೋಬಳಿಯ ಮಾವತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಿಣಸಂದ್ರ ಗ್ರಾಮದಲ್ಲಿ ಮಾರಮ್ಮ ದೇವಿ ಸ್ಥಿರ ಬಿಂಬ ಹಾಗೂ ಪ್ರಾಣ ಪ್ರತಿಷ್ಠಾಪನ ಮಹೋತ್ಸವವನ್ನು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಡಾ: ಹನುಮಂತನಾಥ ಸ್ವಾಮೀಜಿ ದಿವ್ಯ ಸ್ವಾನಿತ್ಯದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪೂಜಾ ಕಾರ್ಯಗಳು ನಡೆಯಿತು. ಸಂದರ್ಭದಲ್ಲಿ ಗಣಪತಿ ಪೂಜೆ. ಗಂಗಾ ಪೂಜೆ. ಪಂಚಗವ್ಯ. ಕಳಸ ಪ್ರತಿಷ್ಠಾಪನೆ. ಕುಂಕುಮಾ ಆರ್ಚನೆ. ಗಣಪತಿ ಹೋಮ. ಜಲದಿವಾಸ. ದಾನ್ಯ ಧಿವಸ. ವಾಸ್ತುವಮ. ಮಹಾ ಮಂಗಳಾರತಿ….
ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಲೇಸರ್ ಅಳವಡಿಕೆ ಅಗತ್ಯ ಎಂದು ತಿಳಿಸಿದ : ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
ವಾಸನ್ ಐ ಕೇರ್‌ನ ತುಮಕೂರು ಶಾಖೆಯ 14 ನೇ ವರ್ಷದ ವಾರ್ಷಿಕೋತ್ಸವದ ಉದ್ಘಾಟನೆ ಮಾಡಿದ ಪರಮ ಪೋಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ: ತುಮಕೂರಿನ ವಾಸನ್ ಐ ಕೇರ್ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಕಣ್ಣಿನ ಆಸ್ಪತ್ರೆಯಲ್ಲಿ ಸಮಗ್ರ ಕಣ್ಣಿನ ಆರೈಕೆ ಲಭ್ಯವಿದ್ದು, ತುಮಕೂರಿನ ಜನತೆ ಇದರ ಸದುಪಯೋಗವನ್ನು ಪಡೆಯಬೇಕೆಂದರು . ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಲೇಸರ್ ಅಥವಾ PHACO ಶಸ್ತ್ರಚಿಕಿತ್ಸೆಯೇ ಹೆಚ್ಚು ಜನರ ಮನ್ನಣೆ ಪಡೆದಿರುವುದು. ಇಂತಹ ಸೌಲಭ್ಯವನ್ನು ರೋಗಿಗಳಿಗೆ ಒದಗಿಸುವುದು ಆಸ್ಪತ್ರೆಗಳ ಜವಾಬ್ದಾರಿಯಾಗಿರುತ್ತದೆ….
ಮಾದಿಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಉಪಾಧ್ಯಕ್ಷರಾಗಿ ಕೆಂಪಯ್ಯ ಅವಿರೋಧವಾಗಿ ಆಯ್ಕೆ*
ತುರುವೇಕೆರೆ: ತಾಲೂಕಿನ ಮಾದಿಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಉಪಾಧ್ಯಕ್ಷರಾಗಿ ಕೆಂಪಯ್ಯ ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಉಪಾಧ್ಯಕ್ಷ ಎಂ.ವೆಂಕಟೇಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. 16 ಸದಸ್ಯ ಬಲದ ಮಾದಿಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಮಾದಿಹಳ್ಳಿ ಕ್ಷೇತ್ರದ ಸದಸ್ಯೆ ಕೆಂಪಯ್ಯ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಪ್ರಕ್ರಿಯೆ ವೇಳೆ ಉಪಾಧ್ಯಕ್ಷ ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ, ತಹಸೀಲ್ದಾರ್ ರೇಣುಕುಮಾರ್ ಅವರು ಮಾದಿಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಕೆಂಪಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು. ನೂತನ…
ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ದಾರಕ್ಕೆ 50,000 ಸಾವಿರ ಡಿ, ಡಿ, ಹಸ್ತಾಂತರ.
ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಹೊಸಕೆರೆ ವಲಯದ ಪಿನ್ನೇನಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಪ್ರಸಾದ ರೂಪದಲ್ಲಿ ಪೂಜ್ಯರು ಮಂಜೂರು ಮಾಡಿದ 50000/- ಸಾವಿರ DD ಮೊತ್ತವನ್ನು, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಗುಬ್ಬಿ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು ದೇವಸ್ಥಾನದ ಕಮಿಟಿಯವರಿಗೆ ಹಸ್ತಾಂತರ ಮಾಡಿದರು. ಈ ಸಮಯದಲ್ಲಿ ಮಾನ್ಯ ಯೋಜನಾಧಿಕಾರಿ ರಾಜೇಶ್ ,ದೇವಸ್ಥಾನದ ಕಮಿಟಿ ಅಧ್ಯಕ್ಷರಾದ ಮಲ್ಲಯ್ಯ ,ಕಮಿಟಿ ಕಾರ್ಯದರ್ಶಿ ರಾಜ್ ಕುಮಾರ್, ಕಮಿಟಿ ಸದಸ್ಯರು, ಒಕ್ಕೂಟ ಅಧ್ಯಕ್ಷರು…