ಅರವಿಂದ ಆಯುರ್ವೇದ ಚಿಕಿತ್ಸಾಲಯದಲ್ಲಿ ಉಚಿತ ಆರೋಗ್ಯ ತಪಾಸಣೆ
ತಿಪಟೂರು. ಅರವಿಂದ ಆಯುರ್ವೇದ ಚಿಕಿತ್ಸಾಲಯದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಪರವಗೊಂಡನಹಳ್ಳಿ ಜಾನಕಿ ರಾಮ ಮಹಿಳಾ ಜ್ಞಾನ ವಿಕಾಸ ಕೇಂದ್ರದ 40 ಮಂದಿ ಮಹಿಳಾ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಬಿ.ಪಿ, ಶುಗರ್, ಹಾಗೂ ಆರೋಗ್ಯ ತಪಾಸಣೆ ಯಶಸ್ವಿಯಾಗಿ ನಡೆಸಲಾಯಿತು, ಈ ಸಂದರ್ಭದಲ್ಲಿ ಅರವಿಂದ ಆಯುರ್ವೇದದ ಅನುಭವಿ ವೈದ್ಯರ ತಂಡ ಭಾಗಿಯಾಗಿದ್ದರು. ಮಹಿಳೆಯರ ಆರೋಗ್ಯ ಸಂಬಂಧಿ ಕಾಯಿಲೆಗಳು ಹಾಗೂ ವೈದ್ಯಕೀಯ ಸಲಹೆ ಸೂಚನೆಗಳನ್ನು ಸಹ ನೀಡಲಾಗಿತ್ತು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿ…