ಜೂನ್ 26ರಂದು ಜನಸ್ಪಂದನಾ, ಜೂನ್ 27ರಂದು ಕೆಂಪೇಗೌಡರ ಜಯಂತಿ/ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿ: ತಹಸೀಲ್ದಾರ್
ತುರುವೇಕೆರೆ: ಸಾರ್ವಜನಿಕರ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಜೂನ್ 26 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ರೇಣುಕುಮಾರ್ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳ ಮೊದಲ ವಾರದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಜಂಟಿಯಾಗಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಿ ಜುಲೈ 15 ರೊಳಗೆ ಜನಸ್ಪಂದನಾ…