ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ದಾಖಲೆ ಸೃಷ್ಟಿಸಿದ ಪ್ರಿಯಾ ಆಂಗ್ಲ ಶಾಲೆ/ ಸತತ 15 ನೇ ಬಾರಿ ಶೇ.100 ಫಲಿತಾಂಶ
ತುರುವೇಕೆರೆ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪಟ್ಟಣದ ಪ್ರಿಯಾ ಆಂಗ್ಲ ಪ್ರೌಢಶಾಲೆಯು ಸತತ 15 ನೇ ಬಾರಿ ಶೇ.100 ಫಲಿತಾಂಶ ಪಡೆದು ದಾಖಲೆ ನಿರ್ಮಿಸಿದೆ ಎಂದು ಶಾಲೆಯ ಕಾರ್ಯದರ್ಶಿ ಪುಷ್ಪಲತಾ ಚಂದ್ರೇಗೌಡ ತಿಳಿಸಿದರು. ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಶಾಲೆಯಿಂದ 28 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 8 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 8 ಮಂದಿ ಉನ್ನತ, 12 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿಂಚನ…