ಬೀದಿ ನಾಯಿ ಕಡಿತಕ್ಕೊಳಗಾದವರಿಗೆ ಪರಿಹಾರ ಧನ ವಿತರಣೆ : ಪಾಲಿಕೆಯಲ್ಲಿ ಸಮಿತಿ ರಚನೆ
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿ ಕಡಿತಕ್ಕೊಳಗಾಗುವ ನಾಗರೀಕರಿಗೆ ದಾಖಲೆಗಳ ಪರಿಶೀಲನಾ ಮತ್ತು ಪರಿಹಾರಧನ ವಿತರಣೆಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೊಳಗಾಗುವ ವ್ಯಕ್ತಿಗಳಿಗೆ ತಗುಲುವ ಚಿಕಿತ್ಸಾ ವೆಚ್ಚ, ಪರಿಹಾರ ಧನ ಹಾಗೂ ಮರಣ ಸಂಭವಿಸಿದ್ದಲ್ಲಿ ಮರಣ ಹೊಂದಿದವರ ಸಂಬಂಧಿತರಿಗೆ ಮರಣೋತ್ತರ ಪರಿಹಾರಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಲು ಸಮಿತಿ ರಚಿಸುವಂತೆ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಸಮಿತಿಯನ್ನು ರಚನೆ…