ಬೀದರ ಕೋಟೆಯ ಮೇಲೆ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ. ಆಕರ್ಷಕ ಏರ್ ಶೋ
ಬೀದರ. – ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ನಿಂದ ಬೀದರ ಕೋಟೆಯ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಯಿತು. ಸೂರ್ಯಕಿರಣ ಟೀಂ ಲೀಡರ್ ಗ್ರುಪ್ ಕ್ಯಾಪ್ಟನ್ ಗುರುಪ್ರಿತಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿದವು. ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಒಂದಾನೊಂದು ಎದುರಿಗೆ ಕ್ರಾಸಿಂಗ್. ಬ್ಯಾರಲ್ ರೋಲ್. ರಾಷ್ಟ್ರೀ ಧ್ವಜ…