ಮಕ್ಕಳು  ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಲೋಕೇಶ್ವರ್

ಗುಬ್ಬಿ:

ಪೋಷಕರು ತಮ್ಮ ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿದರೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಯಾಗಲು ಸಾಧ್ಯವಾಗುವುದು ಎಂದು ಖೋ ಖೋ ಫೆಡರೇಶನ್ ರಾಜ್ಯಘಟಕದ ಅಧ್ಯಕ್ಷರಾದ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷರಾದ ಲೋಕೇಶ್ವರ್ ತಿಳಿಸಿದರು.

 

 

 

 

ಭಾನುವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಮಕ್ಕಳ ಖೋಖೋ ಮತ್ತು ವಾಲಿಬಾಲ್ ಆಟಗಳ ತರಬೇತಿ ಹಾಗೂ ಬೇಸಿಗೆ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಅವರು
ಖೋ ಖೋ ಆಟವು ಅಂತರಾಷ್ಟ್ರೀಯ ಕ್ರೀಡೆಯಾಗಿ ರೂಪಗೊಂಡಿದೆ. ಖೋ ಖೋ ಆಟಗಾರರಿಗೆ ಶೇ 2 ಮೀಸಲಾತಿ ದೊರೆಯುವುದರಿಂದ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಲಭ್ಯವಾಗುವವು ಎಂದ ಅವರು ಉದ್ಯೋಗಗಳಲ್ಲಿಯೂ ಮೀಸಲಾತಿಯನ್ನು ಪಡೆಯಲು ಸಾಧ್ಯವಾಗುವುದು ಎಂದರು.
ಸರ್ಕಾರವು ಇತ್ತೀಚಿಗೆ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿರುವುದರಿಂದ ಅದರ ಸದುಪಯೋಗ ಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಕರೆ ನೀಡಿದರು.

 

 

 

ಚನ್ನಬಸವೇಶ್ವರ ಕ್ರೀಡಾ ಸಂಘದ ಕಾರ್ಯದರ್ಶಿ ಶಂಕರ್ ಕುಮಾರ್ ಮಾತನಾಡಿ ಮಕ್ಕಳಲ್ಲಿ ಕ್ರೀಡಾಮನೋಭಾವನೆ ಬೆಳೆಸುವ ಉದ್ದೇಶದಿಂದ ಸಂಘದ ವತಿಯಿಂದ ನಿರಂತರವಾಗಿ ಮಕ್ಕಳಿಗೆ ತರಬೇತಿ ಹಾಗೂ ಅಭ್ಯಾಸ ಮಾಡಿಸಲಾಗುತ್ತಿದೆ. ಸಂಘದ ನಿರಂತರ ಪ್ರಯತ್ನದಿಂದಾಗಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತರಬೇತು ಮಾಡಲು ಸಾಧ್ಯವಾಗಿದೆ ಎಂದ ಅವರು ಓದಿನ ಜೊತೆಯಲ್ಲಿಯೇ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವ ಮನೋಭಾವನೆ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

 

 

ಮುಖಂಡ ಬೆಟ್ಟಸ್ವಾಮಿ ಮಾತನಾಡಿ ಚನ್ನಬಸವೇಶ್ವರ ಕ್ರೀಡೆ ಸಂಘವು ಜಿಲ್ಲೆಯಲ್ಲಿಯೇ ಅತ್ಯುತ್ತಮವಾದ ಸಂಸ್ಥೆಯಾಗಿದೆ.ಅವರ ನಿರಂತರ ಪ್ರಯತ್ನ, ಪ್ರೋತ್ಸಾಹ ಹಾಗೂ ತರಬೇತಿಯಿಂದಾಗಿ ಉತ್ತಮ ಕ್ರೀಡಾಪಟುಗಳು ಹೊರ ಹೊಮ್ಮಲು ಸಾಧ್ಯವಾಗಿದೆ. ಕೇವಲ ಮೊಬೈಲ್, ಟಿವಿ, ಕಂಪ್ಯೂಟರ್, ಲ್ಯಾಪ್ ಟಾಪ್ ಗಳಲ್ಲಿಯೇ ಹೆಚ್ಚು ಸಮಯ ಕಳೆಯುವ ಮಕ್ಕಳಿಗೆ ಕ್ರೀಡೆಗಳು ಪುನಃ ಚೇತನ ನೀಡಲು ಸಹಕಾರಿಯಾಗುವವು ಎಂದು ಹೇಳಿದರು.

 

 

ಇದೇ ಸಂದರ್ಭದಲ್ಲಿ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ ಸುಮಾರು 83 ಮಕ್ಕಳಿಗೆ ಸಂಘದ ವತಿಯಿಂದ ಟಿ-ಶರ್ಟ್, ಪ್ರಮಾಣ ಪತ್ರ ಹಾಗೂ ಪದಕಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.

 

 

 

ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ,ಖೋ ಖೋ ತರಬೇತಿದಾರ ಲೋಕೇಶ್, ವಾಲಿಬಾಲ್ ತರಬೇತಿದಾರ ವಾಸಿಂಅನ್ವರ್,ಮೋಹನ್,ಶಿವು, ಪೋಷಕರು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *