ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣೆ

ಗುಬ್ಬಿ ಸುದ್ದಿ

ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಲಾಯಿತು.

 

ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ’ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು.

ಪೂಜೆ ಸಲ್ಲಿಸಿ ಮಾತನಾಡಿದ ಅವರು ‘ಹಡಪದ ಅಪ್ಪಣ್ಣ ಅವರು ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣೀಯ ಎಂದು ತಿಳಿಸಿದರು.

 

 

‘ಸಮಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಶರಣರು, ಸಂತರು, ದಾರ್ಶನಿಕರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ. ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಹಡಪದ ಅಪ್ಪಣ್ಣನವರು ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಕಾಯಕ ತತ್ವದಡಿ ಬದುಕು ರೂಪಿಸಿಕೊಳ್ಳುವುದೇ ಶರಣ ಆಶಯವಾಗಿತ್ತು ಎಂದು ತಿಳಿಸಿದರು.

ಈ ಜಯಂತಿಯಲ್ಲಿ ಹೆಚ್ಚುವರಿ ಶಿರಸ್ತೇದಾರ್ ಶ್ರೀರಂಗ, ಪ.ಪಂ.ಮುಖ್ಯಾಧಿಕಾರಿ ಮಂಜುಳಾ ದೇವಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪವಿತ್ರ, ಸೇರಿದಂತೆ ತಾಲೂಕು ಕಚೇರಿಯ ಸಿಬ್ಬಂದಿ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *