ಗುಬ್ಬಿ ಸುದ್ದಿ
ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನೆ ಸಂಸ್ಥೆಯು ಕಳೆದ ಒಂದು ದಶಕದಿಂದ ರಾಜ್ಯದಲ್ಲಿ ಗ್ರಾಮೀಣ ಬಡ ಮತ್ತು ದುರ್ಬಲ ವರ್ಗದ ಮಹಿಳೆಯರಿಗೆ ಸ್ವಸಹಾಯ ಗುಂಪುಗಳು, ವಾರ್ಡ್, ಗ್ರಾಮ ಮತ್ತು ತಾಲ್ಲೂಕು ಪಂಚಾಯಿತಿ ಮಟ್ಟದ ಒಕ್ಕೂಟಗಳು, ವಿವಿಧ ಉತ್ಪಾದಕರ ಗುಂಪುಗಳಂತಹ ಸಮುದಾಯ ಆಧಾರಿತ ಸಂಸ್ಥೆಗಳನ್ನು ರಚಿಸಿಸುವ ಮೂಲಕ ಗಮನಾರ್ಹ ಸಾಧನೆಗಳನ್ನು ಮಾಡಿದೆ.
ಈವರೆಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್.ಆರ್.ಎಲ್. ಎಮ್) ಕಾರ್ಯಕ್ರಮದಡಿ 28 ಲಕ್ಷಕ್ಕೂ ಅಧಿಕ ಗ್ರಾಮೀಣ ಮಹಿಳೆಯರನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ಒಳಪಡಿಸಿ ಅವರುಗಳ ಸಮಗ್ರ ಏಳಿಗೆಗೆ ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು.
ಸಂಜೀವಿನಿ ksrlps ನ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ರೊಟ್ಟಿ, ಪಾಪಡ್, vermicelli ಉತ್ಪನ್ನಗಳ ಉತ್ಪಾದನೆಗೆ ಸಂಬಂಧಿಸಿದಂತೆ ತಾಲೂಕಿನಾದ್ಯಂತ ಸ್ವಸಹಾಯ ಗುಂಪಿನಿಂದ ಗುರ್ತಿಸಿರುವ ಮಹಿಳಾ ಉದ್ದಿಮೆದಾರರನ್ನು ಮೇಲ್ದರ್ಜೆಗೆ ಏರಿಸುವ ಸಲುವಾಗಿ ಇಂದು ತಾಲೂಕು ಪಂಚಾಯಿತಿ ಹಾಗೂ ತಾಂತ್ರಿಕ ಬೆಂಬಲ ಸಂಸ್ಥೆ ಬೆಂಗಳೂರು ಸಹಯೋಗದೊಂದಿಗೆ ನಾಲ್ಕು ದಿನಗಳ ಕಾಲ ಮಹಿಳಾ ಉದ್ದಿಮೆದಾರರಿಗೆ ಸಾಮರ್ಥ್ಯ ಅಭಿವೃದ್ಧಿ ತರಭೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು ಇದರ ಸದುಪಯೋಗ ಮಾಡಿಕೊಳ್ಳಲು ತಿಳಿಸಿದರು.
ಸಂಸ್ಥೆಯ ನಾರಾಯಣ್ ಮಾತನಾಡಿ ಈ ಸಂಸ್ಥೆಯು ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉಧ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿದೆ. ಈವರೆಗೆ ರಾಜ್ಯದಲ್ಲಿ 50,000 ಕ್ಕೂ ಅಧಿಕ ಬಡ ಮಹಿಳೆಯರು ಕಿರು ಮತ್ತು ಸಣ್ಣ ಉದ್ದಿಮೆಗಳನ್ನು ಪ್ರಾರಂಭಿಸಿ, ಈ ಮೂಲಕ ವಿವಿಧ ರೀತಿಯ ಉತ್ಪನ್ನಗಳು ಮತ್ತು ಸೇವಾ ರಂಗದಲ್ಲಿ ತೊಡಗಿಸಿಕೊಳ್ಳುವಂತೆ ಹಾಗೂ ಕೃಷಿ ಆಧಾರಿತ ಗ್ರಾಮೀಣ ಬಡ ಮಹಿಳೆಯರಿಗಾಗಿ ವಿವಿಧ ರೀತಿಯ ಕೃಷಿ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದು, ಅವರುಗಳ ಅಭಿವೃದ್ಧಿಗಾಗಿ ಉತ್ಪಾದಕರ ಗುಂಪುಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಪರಶುರಾಮ್, ಹೇಮಲತಾ, ಸಂಜೀವಿನಿ ಸಂಸ್ಥೆಯ ಸಿಬ್ಬಂದಿ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.
ಸಂಜಯ್ ಕೊಪ್ಪ ಗುಬ್ಬಿ