ಜಿಲ್ಲೆಯಲ್ಲಿ ಮುಂದಿನ 03 ದಿನಗಳ ಕಾಲ *ಗುಡುಗು/ಸಿಡುಲು ಸಹಿತ ಭಾರಿ ಮಳೆಯಾಗುವ* ಸಾಧ್ಯತೆ ಹೆಚ್ಚಾಗಿರುವುದರಿಂದ ಜಿಲ್ಲೆಗೆ Orange & Yellow ಅಲರ್ಟ್ ನೀಡಲಾಗಿದೆ ಎಂದು ತಹಶೀಲ್ದಾರ್ ಆರತಿ ಬಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಸಿಡಲು/ಭಾರಿ ಮಳೆಯಿಂದ ಸುರಕ್ಷಿತರಾಗಿರಲು ಅರಿವು ಮೂಡಿಸುವುದು, ಮಣ್ಣಿನ ಮನೆ/ಕಟ್ಟಡಗಳು, ದುರ್ಬಲ ಮರದ ಕೊಂಬೆಗಳು, ಜಲಕಾಯ/ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡುವುದು, ಶಾಲೆ/ಅಂಗನವಾಡಿ ಮೇಲ್ಚಾವಣಿ/ಗೋಡೆಗಳ ಸುಸ್ಥಿತಿ ಪರಿಶೀಲಿಸುವುದು, ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ವಾರ್ಡ್/ಅಂಡರ್ ಪಾಸ್/ರಸ್ತೆಗಳ ಕುರಿತು ಮುನ್ನೆಚ್ಚರಿಕೆ ವಹಿಸುವುದು. ಅರ್ಹ ಪ್ರಕರಣಗಳಿಗೆ ನಿಯಮಾನುಸಾರ ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ತುರ್ತು ಪರಿಹಾರ ನೀಡುವ ನಿಟ್ಟಿನಲ್ಲಿ ತಾಲೂಕು ಆಡಳಿತ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಿರ್ದೇಶನಗಳಂತೆ ಯಾವುದೇ ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿರುವ ಹಿನ್ನೆಲೆ ತಾಲೂಕು ಮಟ್ಟದ ಅಧಿಕಾರಿಗಳು, ಉಪ ತಹಶೀಲ್ದಾರ್, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದು ಆಗು ಹೋಗುಗಳ ಬಗ್ಗೆ ನಿಗಾ ವಹಿಸಲು ಸೂಚನೆ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ದುರುಗಳಿಗಾಗಿ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಸಹಾಯವಾಣಿ ಕೇಂದ್ರ ವನ್ನು ತೆರೆದಿದ್ದು, ತುರ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲು ಸಹಾಯವಾಣಿ ಸಂಖ್ಯೆ 08131-222234 ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ