ಗುಬ್ಬಿ ಸುದ್ದಿ
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಸಭೆಯನ್ನು ಶಾಸಕ ಎಸ್ ಆರ್ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಜುಲೈ 26 ರ ಮಧ್ಯಾಹ್ನ 03 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು.
ಆಗಸ್ಟ್ 15 ರಂದು ನಡೆಯುವ ರಾಷ್ಟ್ರೀಯ ಹಬ್ಬ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅದ್ದೂರಿಯಾಗಿ ಆಚರಿಸುವ ಸಲುವಾಗಿ ಜುಲೈ 26 ರ ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಆರತಿ ಬಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕರಾದ ಎಸ್ ಆರ್ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಕಂದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಸಲುವಾಗಿ ರೂಪು ರೇಷೆಗಳನ್ನು ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ವಿವಿಧ ಪಕ್ಷದ ಮುಖಂಡರು , ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಆಗಮಿಸಿ ತಮ್ಮ ಅತ್ಯ ಅಮೂಲ್ಯ ಸಲಹೆಗಳನ್ನು ನೀಡಿ ಸ್ವಾತಂತ್ರ್ಯ ದಿನಾಚರಣೆಯ ಯಶಸ್ವಿಗೆ ಸಹಕರಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.