ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಗ್ರಾಮೀಣ ಭಾಗದ ಬಡ ಜನತೆಗೆ ಅನುಕೂಲ ಪಿ ಎಸ್ ಐ ಶಿವಕುಮಾರ್

ಗ್ರಾಮಾಂತರದ ಭಾಗದ ಜನರಿಗೆ ಇಂತಹ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾಡುವುದರಿಂದ ಹೆಚ್ಚು ಅನುಕೂಲವಾಗಲಿದೆ ಎಂದು ಸಿ ಎಸ್ ಪುರ ಪೊಲೀಸ್ ಠಾಣೆಯ ಪಿ. ಎಸ್ ಐ ಶಿವಕುಮಾರ್ ತಿಳಿಸಿದರು.

ಗುಬ್ಬಿ ತಾಲೂಕಿನ ಸಿ ಎಸ್ ಪುರ ಗ್ರಾಮದಲ್ಲಿ ಚಾಲುಕ್ಯ ಆಸ್ಪತ್ರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಚಾಲುಕ್ಯ ಆಸ್ಪತ್ರೆಯು ಇದುವರೆಗೂ ನೂರಾರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ತಾಲೂಕಿನಲ್ಲಿ ಮಾಡುತ್ತಿರುವುದು ಖಂಡಿತವಾಗಿಯೂ ಒಂದು ಉತ್ತಮ ಸಾಮಾಜಿಕ ಸೇವೆಯಾಗಿದೆ ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಮತ್ತು ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಸಹ ಉಚಿತವಾಗಿ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಸಂತೋಷವಾಗಿದೆ ಸುಮಾರು ಹತ್ತಕ್ಕೂ ಹೆಚ್ಚು ವೈದ್ಯರು ಆಗಮಿಸಿ ಹೃದಯ, ಮೂಳೆ, ಮಹಿಳೆಯರ ಆರೋಗ್ಯದ ಬಗ್ಗೆ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ ಇಲ್ಲಿ ತಪಾಸಣೆ ಮಾಡುತ್ತಿರುವುದು ಈ ಭಾಗದ ಜನರಿಗೆ ಅನುಕೂಲವಾಗಿರುತ್ತದೆ ಎಂದು ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ರಾಜೇಶ್ ಮಾತನಾಡಿ ನಮ್ಮ ಸಂಸ್ಥೆಯು ಚಾಲುಕ್ಯ ಆಸ್ಪತ್ರೆಯ ಜೊತೆಯಲ್ಲಿ ಟೈಯಪ್ ಅಗಿದ್ದು ಇಡೀ ಜಿಲ್ಲೆಯಲ್ಲಿಯೇ ಚಾಲುಕ್ಯ ಆಸ್ಪತ್ರೆಗೆ ಹೆಚ್ಚಿನ ರೋಗಿಗಳು ತೆರಳಿ ಆರೋಗ್ಯವಂತರಾಗಿರುವುದು ನಮಗೆ ಹೆಮ್ಮೆಯಾಗಿದೆ ಪ್ರತಿ ಮೂರು ತಿಂಗಳಿಗೊಮ್ಮೆ ಇಂತಹ ವಿಶೇಷ ಶಿಬಿರಗಳನ್ನು ಆಸ್ಪತ್ರೆಗೆ ಮಾಡುತ್ತಿರುವುದು ಗ್ರಾಮೀಣ ಭಾಗದ ಹಾಗು ಆರ್ಥಿಕವಾಗಿ ಹಿಂದುಳಿದ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದೆ ಎಂದು ತಿಳಿಸಿದರು.

ಚಾಲುಕ್ಯ ಆಸ್ಪತ್ರೆ ಸಿಇಒ ಡಾ. ನಾಗಭೂಷಣ್ ಮಾತನಾಡಿ ಸಮಾಜಕ್ಕೆ ಏನಾದರೂ ಕೊಡಗೆ ನೀಡಬೇಕು ಎಂಬ ಹಿನ್ನೆಲೆಯಲ್ಲಿ ಆರೋಗ್ಯ ಸೇವೆಯನ್ನು ನಾವು ಮಾಡುತ್ತಿದ್ದೇವೆ ಸುಮಾರು 480 ಕ್ಕೂ ಹೆಚ್ಚು ಕಣ್ಣಿನ ಉಚಿತ ಆರೋಗ್ಯ ಶಿಬಿರಗಳು, 22ಕ್ಕೂ ಹೆಚ್ಚು ಉಚಿತ ಬೃಹತ್ ಆರೋಗ್ಯ ಶಿಬಿರಗಳನ್ನು ಮಾಡಿದ್ದೇವೆ ಇದೆ ಅಲ್ಲದೆ ಯಶಸ್ವಿನಿ, ಧರ್ಮಸ್ಥಳ ಸಂಸ್ಥೆ, ಚಾಲುಕ್ಯ 365 ಯೋಜನೆ ಸೇರಿದಂತೆ ಎಲ್ಲಾ ರೀತಿಯ ವಿಮಾ ಕಂಪನಿಗಳ ಸೌಲಭ್ಯವು ಸಹ ನಮ್ಮಲಿದ್ದು ತಾಯಿ ಯಶೋಧ ಯೋಜನೆ ಮಾಡುವ ಮೂಲಕ ಇಡೀ ರಾಜ್ಯದಲ್ಲಿಯೇ ದೇಶ ಯೋಜನೆ ಮಾಡಿದ್ದೇವೆ ಎಂದು ತಿಳಿಸಿದರು.

 

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 300 ಕ್ಕೊ ಹೆಚ್ಚು ಸಾರ್ವಜನಿಕರು ಆಗಮಿಸಿ ತಮ್ಮ ಆರೋಗ್ಯವನ್ನು ಪರೀಕ್ಷೆ ಮಾಡಿಸಿಕೊಂಡಿರುವುದು ಖುಷಿಕೊಟ್ಟಿದೆ ಎಂದು ತಿಳಿಸಿದರು.

 

ಇದೇ ಸಂದರ್ಭದಲ್ಲಿ ಡಾ ಕುಮಾರ್, ಮಹಾಲಕ್ಷ್ಮಿ,
ದುಶಾಂತ, ಸೇರಿದಂತೆ ಹತ್ತಕ್ಕೂ ಹೆಚ್ಚು ವೈದ್ಯರು ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *