ಜೆ ಡಿ ಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್.ಡಿ ದೇವೇಗೌಡರ ಕುಟುಂಕ್ಕೆ ಕಳಂಕ ತರಲು ಹಾಗೂ ರಾಜ್ಯದ ಹೆಣ್ಣುಮಕ್ಕಳ ಮಾನವನ್ನು ಹರಾಜು ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಜೆಡಿಎಸ್ ಘಟಕದಿಂದ ಪ್ರತಿಭಟನೆ

ತುಮಕೂರು : ತುಮಕೂರು ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ತುಮಕೂರು ನಗರದ ಜೆ ಡಿ ಎಸ್ ಪಕ್ಷದ ಕಛೇರಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಬೃಹತ್ ಮೆರವಣಿಗೆಯನ್ನು ನಡೆಸಿದ ಜಿಲ್ಲಾ ಜೆ ಡಿ ಎಸ್ ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಜಿಲ್ಲೆಯ ಎಲ್ಲಾ ಜೆ ಡಿ ಎಸ್ ಕಾರ್ಯಕರ್ತರು ಸೇರಿ ಹಾಸನ ಜಿಲ್ಲೆಯಲ್ಲಿ ಪೆನ್‌ಡ್ರೈವ್ ಮತ್ತು ಅಶ್ಲೀಲ ವಿಡಿಯೋ ಚಿತ್ರಣಗಳ ಮೂಲಕ ಹೆಣ್ಣು ಮಕ್ಕಳ ಮಾನವನ್ನು ಹರಾಜು ಹಾಕುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೖಗೋಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸುವ ಮುಂಚಿತವಾಗಿ ಜಿಲ್ಲಾಧ್ಯಕ್ಷರಾದ ಆರ್.ಸಿ.ಆಂಜಿನಪ್ಪನವರು ಮಾತನಾಡಿ ಇತ್ತೀಚೆಗೆ ಈಡೀ ರಾಜ್ಯದಲ್ಲಿಯೇ ಸಂಚಲನವನ್ನು ಸೃಷ್ಠಿಸಿರುವ ಲೈಂಗಿಕ ಹಗರಣ ಮತ್ತು ಅದನ್ನು ಪೆನ್‌ಡ್ರೈವ್ ಹಾಗೂ ಅಶ್ಲೀಲ ವಿಡಿಯೋ ಮೂಲಕ ರಾಜ್ಯಾದ್ಯಂತ ಹಂಚಲಗಿದ್ದು, ಈ ಲೈಂಗಿಕ ಹಗರಣವನ್ನು ಯಾರೂ ಸಮರ್ಥಿಸಿಕೊಳ್ಳಲಾರರು, ಇದು ಸಂಪೂರ್ಣ ವಿಚಾರಣೆಯ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂಬುದು ಎಲ್ಲರೂ ಬಯಸಿರುವ ವಿಷಯ ಎಂದ ಅವರು ಈ ಲೈಂಗಿಕ ಹಗರಣದಲ್ಲಿ ಸಂತ್ರಸ್ಥೆಯಾಗಿರುವ ಹೆಣ್ಣು ಮಕ್ಕಳನ್ನು ಪೆನ್‌ಡ್ರೈವ್ ಹಾಗೂ ಅಶ್ಲೀಲ ವಿಡಿಯೋ ಮೂಲಕ ಈಡೀ ರಾಜ್ಯಾದ್ಯಂತ ಹಂಚಿರುವುದು ಶಿಕ್ಷಾರ್ಹ ಅಪರಾಧವೇ ಆಗಿರುತ್ತದೆ. ಇದರ ರೂವಾರಿ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿರುವ ಡಿ.ಕೆ.ಶಿವಕುಮಾರ್ ಎಂಬುದು ಜಗ್ಗಜನಿತವಾಗಿದೆ, ಅದೂ ಅಲ್ಲದೇ ಇದಕ್ಕೆ ಸಂಬಂಧಪಟ್ಟಂತೆ ವಕೀಲ ದೇವರಾಜೇಗೌಡರವರು ಪತ್ರಿಕಾಗೋಷ್ಠಿ ಕರೆದು ಎಲ್ಲಾ ವಿಷಯಗಳನ್ನು ಕೂಲಂಕುಷವಾಗಿ ವಿವರಿಸಿರುತ್ತಾರೆ ಎಂದು ತಿಳಿಸಿದರು.

ನಂತರ ಮಾಜಿ ಶಾಸಕರು ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಹೆಚ್.ನಿಂಗಪ್ಪನವರು ಮಾತನಾಡಿ ಸರ್ಕಾರದ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ, ಅಧಿಕಾರದಲ್ಲಿರುವ ಸಚಿವರು ಅದರಲ್ಲಿಯೂ ಉಪ ಮುಖ್ಯಮಂತ್ರಿಗಳು ಇಂತಹ ನೀಚ ಕೆಲಸಕ್ಕೆ ಇಳಿದಿರುವುದು ಈಡೀ ರಾಜ್ಯದ ಜನತೆ ತಲೆ ತಗ್ಗಿಸುವಂತಾಗಿದೆ ಇದು ನಮ್ಮಗಳ ದುರ್ದೈವ, ರಾಜ್ಯದಲ್ಲಿ ತೀವ್ರ ಬರಗಲಾದಿಂದ ತತ್ತರಿಸುತ್ತಿರುವ ರಾಜ್ಯದ ಜನತೆಯ ಶ್ರೇಯೋಭಿವೃದ್ಧಿಯ ಬಗ್ಗೆ ಚಿಂತಿಸದೇ ಇಂತಹ ಸ್ವಾರ್ಥ ರಾಜಕೀಯಕ್ಕೆ ಇಳಿದಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಈ ಚುನಾವಣಾ ಸಂದರ್ಭದಲ್ಲಿ ಜಾತ್ಯಾತೀತ ಜನತಾದಳದ ನಾಯಕನಾಗಿರುವ ಮಾಜಿ ಪ್ರಧಾನಮಂತ್ರಿಗಳಾದ ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿರುವ ಶ್ರೀ ಹೆಚ್.ಡಿ.ಕುಮಾರ ಸ್ವಾಮಿಯವರ ವರ್ಚಸ್ಸನ್ನು ಕುಂದಿಸಿ, ಜಾತ್ಯಾತೀತ ಜನತಾದಳಕ್ಕೆ ಕಳಂಕ ತರುವುದು ಇದರ ಪ್ರಮುಖ ಉದ್ದೇಶವಾಗಿರುತ್ತದೆ, ಅದೂ ಅಲ್ಲದೇ ಮೈತ್ರಿ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷಕ್ಕೆ ಮುಜುಗರವನ್ನು ಉಂಟು ಮಾಡಿ ಚುನಾವಣೆಯಲ್ಲಿ ಹಿನ್ನಡೆಯನ್ನುಂಟು ಮಾಡುವ ಕೆಟ್ಟ ಆಲೋಚನೆಯೂ ಸಹ ಇದರಲ್ಲಿ ಅಡಗಿದೆ. ಈ ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿರುವ ಮಹಿಳೆಯರ ಫೋಟೋಗಳನ್ನು ಯಥಾವತ್ತಾಗಿ ತೋರಿಸಿ ಅವರ ಮರ್ಯಾದೆಯನ್ನು ತೆಗೆದಿರುತ್ತಾರೆ ಜೊತೆಗೆ ಆ ಕುಟುಂಬಗಳ ಪರಿಸ್ಥಿತಿ ಬಹಳ ಶೋಚನೀಯವಾಗಿರುತ್ತದೆ. ಮಹಿಳೆಯರ ಮಾನ ಮತ್ತು ರಕ್ಷಣೆಗೆ ಕಿಂಚಿತ್ತೂ ಗೌರವ ಕೊಡದೇ ಇಂತಹ ಹೀನ ಕೃತ್ಯವನ್ನು ಎಸಗಿದ್ದಾರೆಂದು ಹೇಳಲಾಗಿರುವ ಡಿ.ಕೆ.ಶಿವಕುಮಾರ್ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ತೆಗೆದುಕೊಳ್ಳುವುದು ರಾಜ್ಯದ ಜನತೆಯ ಹಿತದೃಷ್ಠಿಯಿಂದ ಇದು ಅನಿವಾರ್ಯವಾಗಿರುತ್ತದೆ. ಆದುದರಿಂದ ಈ ಕುರಿತು ಮಾನ್ಯ ರಾಜ್ಯಪಾಲರು ಗಮನಹರಿಸಬೇಕೆಂದು ಮನವಿ ಪತ್ರವನ್ನು ಮಾನ್ಯ ತುಮಕೂರು ಜಿಲ್ಲಾಧಿಕಾರಿಗಳ ಮೂಲಕ ಮಾಡುತ್ತಿರುವುದಾಗಿ ತಿಳಿಸಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಆರ್.ಸಿ.ಆಂಜಿನಪ್ಪ, ರಾಜ್ಯ ಉಪಾಧ್ಯಕ್ಷರಾದ ಹೆಚ್.ನಿಂಗಪ್ಪ, ಕಾರ್ಯಧ್ಯಕ್ಷರಾದ ಟಿ.ಅರ್.ನಾಗರಾಜು, ಮುಖಂಡರುಗಳಾದ ಕೆ.ಎಂ.ತಿಮ್ಮರಾಯಪ್ಪ, ಆರ್.ಉಗ್ರೇಶ್, ಬಿ.ಎಸ್.ನಾಗರಾಜು, ಕೊಂಡವಾಡಿ ಚಂದ್ರಶೇಖರ್, ಎಸ್.ಆರ್.ಗೌಡ್ರು, ಬೆಳಗುಂಬ ವೆಂಕಟೇಶ್, ಟಿ.ಕೆ.ನರಸಿಂಹಮೂರ್ತಿ, ಕೆ.ಟಿ. ವಿಜಿ ಗೌಡ, ಕೆಂಪರಾಜು, ಉಪ್ಪಾರಹಳ್ಳಿ ಕುಮಾರ್, ಚೆಲುವರಾಜು, ಪ್ರಸನ್ನ ಕುಮಾರ್ (ಪಚ್ಚಿ) ತಾಹೇರ ಕುಲ್ಸುಂ, ಲೀಲಾವತಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!