ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗಿಗಳು ಸಂಪೂರ್ಣ ಗುಣಮುಖರಾಗಲು ಸಾಧ್ಯವಿದೆ-ನೂರುನ್ನಿಸಾ
ತುಮಕೂರು : ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ತಿಳಿಸಿದರು. ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಮಾರು ವರ್ಷಗಳ ಹಿಂದೆ ಕುಷ್ಠರೋಗವು ಯಾವುದೇ ಔಷಧೋಪಚಾರವಿಲ್ಲದೆ ಗುಣಮುಖವಾಗದ ಖಾಯಿಲೆಯಾಗಿತ್ತು. ಕುಷ್ಠರೋಗಿಗಳನ್ನು ಅಸ್ಪಶ್ಯರಂತೆ ಕಾಣುವ ವ್ಯವಸ್ಥೆಯಿತ್ತು. ಪ್ರಸ್ತುತ ಕುಷ್ಠರೋಗಕ್ಕೆ ಉಚಿತ…