ಕರ್ನಾಟಕದಲ್ಲಿ ಕನ್ನಡ ಅನಾಥವಾಗಬಾರದು : ಕನ್ನಡಿಗರು ಜಾಗೃತರಾಗಬೇಕು’
ಕರ್ನಾಟಕದಲ್ಲಿ ಕನ್ನಡ ಅನಾಥವಾಗಬಾರದು, ಕನ್ನಡಿಗರು ಜಾಗೃತರಾಗಬೇಕು. ಬಸವಾದಿ ಶರಣರು, ದಾಸರು, ದಾರ್ಶನಿಕರು ಕಟ್ಟಿ ಬೆಳೆಸಿದ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ನಮ್ಮೆಲ್ಲರದಾಗಬೇಕು. ಈ ಕಾರ್ಯದಲ್ಲಿ ವಿದ್ಯಾರ್ಥಿಗಳು, ಪೋಷಕರು ಪ್ರಧಾನ ಪಾತ್ರ ವಹಿಸಬೇಕೆಂದು ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ್ ಬಿಳಿಮಲೆ ತಿಳಿಸಿದರು. ಅವರಿಂದು ತುಮಕೂರು ನಗರದ ಕನ್ನಡ ಭವನದಲ್ಲಿ ನಡೆದ “ವೀರ ಸೌಧಾ ಮಿನಿ ಚಿತ್ರಸಂಪುಟ” ಬಿಡುಗಡೆಗೊಳಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡುತ್ತಿದ್ದರು. ಸ್ಥಳೀಯ ಮಟ್ಟದಲ್ಲಿ ಕನ್ನಡವನ್ನು ಉಳಿಸುವ ಕೆಲಸಗಳು…