ಜನಸ್ನೇಹಿಯಾಗಿ ಅಧಿಕಾರಿಗಳು ಕೆಲಸ ಮಾಡಬೇಕು ಜಿಲ್ಲಾಧಿಕಾರಿ ಶುಭ ಕಲ್ಯಾಣ್ . ಜಿಲ್ಲಾಧಿಕಾರಿ ಶುಭಕಲ್ಯಾಣ
ಗುಬ್ಬಿ, ಸುದ್ದಿ : ಸಾರ್ವಜನಿಕರು, ರೈತರಿಂದ ಬರುವ ಕುಂದುಕೊರೆತೆಯ ಅರ್ಜಿಗಳನ್ನು ಅಧಿಕಾರಿಗಳು ಶೀಘ್ರವಾಗಿ ವಿಲೇವಾರಿ ಮಾಡದೆ ಹೋದರೆ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಎಚ್ಚರಿಸಿದರು. ಪಟ್ಟಣದ ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮ ಮಟ್ಟದಲ್ಲಿ ವಿಎ ಮತ್ತು ಆರ್ ಐ ಗಳು ರೈತರ ಸಮಸ್ಯೆಗಳನ್ನು ಕಾಲಮಿತಿ ಒಳಗೆ ಪರಿಹರಿಸಬೇಕು. ಜನಸ್ನೇಹಿಯಾಗಿ ಅಧಿಕಾರಿಗಳು ಕೆಲಸ ಮಾಡಬೇಕು. ಕಂದಾಯ…