ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಣ್ಣನವರ ಕೊಡುಗೆ ಅಪಾರ :ನಯಾಜ್ ಅಹಮದ್
ತುಮಕೂರು:ಜನಾನುರಾಗಿ ನಾಯಕರಾದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 21 ರಂದು ನಡೆಯುವ ಕೆ.ಎನ್.ಆರ್ ಅಮೃತಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮುಸ್ಲಿಂ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಗರಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಯಾಜ್ ಅಹಮದ್ ಮನವಿ ಮಾಡಿದ್ದಾರೆ. ಕೆ.ಎನ್.ರಾಜಣ್ಣ ಮುಸ್ಲಿಂ ಹಿತೈಷಿಗಳ ಬಳಗದವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆ.ಎನ್.ರಾಜಣ್ಣ ಅವರದು ನೇರ ಮತ್ತು ನಿಷ್ಠೂರ ನಡೆ, ರಾಜಕೀಯವಾಗಿ, ಅರ್ಥಿಕವಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಹಲವಾರು…