ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ 24-25 ರ ಶೈಕ್ಷಣಿಕ ಸಭೆ
ಮಧುಗಿರಿ : ಜಿಲ್ಲಾ ಉಪನಿರ್ದೇಶಕ ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ಶಿರಾ, ಮಧುಗಿರಿ, ಕೊರಟಗೆರೆ, ಪಾವಗಡ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮುಂದಿನ 24-25 ರ ಶೈಕ್ಷಣಿಕ ಸಭೆಯನ್ನು ಮಧುಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಸಭೆಯನ್ನು ಉದ್ದೇಶಿಸಿ ಉಪನಿರ್ದೇಶಕರಾದ ಗಂಗಾಧರ್ ಮಾತನಾಡಿ ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಫಲಿತಾಂಶ ತರುವಲ್ಲಿ ಜಿಲ್ಲೆಯ ಎಲ್ಲಾ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಶ್ರಮಿಸಿದ್ದಾರೆ, ಹಾಗೆಯೇ ಮುಂದಿನ ಶೈಕ್ಷಣಿಕ ವರ್ಷವೂ ಇನ್ನಷ್ಟು ಹೆಚ್ಚಿನ ಫಲಿತಾಂಶಕ್ಕೆ ಶ್ರಮಿಸಬೇಕು ಎಂದು…