ಹನುಮ ಜಯಂತಿ ಅಂಗವಾಗಿ ವಿಶೇಷ ಅಲಂಕಾರ
ತಿಪಟೂರು : ನಗರದ ವ್ಯಾಸರಾಜ ಪ್ರತಿಷ್ಠಾಪಿತ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶನಿವಾರ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ಮತ್ತು ಪವಮಾನ ಸೂಕ್ತ ಪಾರಾಯಣ ನೆರವೇರಿತು.ವ್ಯಾಸರಾಜ ಪ್ರತಿಷ್ಠಾಪಿತ ಕೋಟೆ ಆಂಜನೇಯ ಸ್ವಾಮಿಯವರಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗವನ್ನು ಮಾಡಲಾಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳ ಆಗಮಿಸಿ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾದರು.