ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್- ಅಪಾರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ
ತುಮಕೂರು: ಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾಣಕ್ಕೆ ಶ್ರಮಿಸಿದವರಲ್ಲಿ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಅಪಾರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಎಂಪ್ರೆಸ್ ಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಭಾರತ ಸಂವಿಧಾನ ದಿನಾಚರಣೆ ಹಾಗೂ ವಿಶೇಷ…