ಪ್ರತಿ ೨೦ ನಿಮಿಷಕ್ಕೊಮ್ಮೆ ನಗರ ಸಾರಿಗೆ ಬಸ್ಗಳ ಸಂಚಾರ ಶುಭ ಕಲ್ಯಾಣ್ ಸೂಚನೆ:
ತುಮಕೂರು: ಸಾರ್ವಜನಿಕರ ಅನುಕೂಲಕ್ಕಾಗಿ ನಗರದ ಬಸ್ ನಿಲ್ದಾಣದಿಂದ ಗುಬ್ಬಿ ಗೇಟ್ ಮಾರ್ಗವಾಗಿ ರಾಷ್ಟೀಯ ಹೆದ್ದಾರಿ ಮೂಲಕ ಶಿರಾಗೇಟ್ವರೆಗೂ ಪ್ರತಿ ೨೦ ನಿಮಿಷಕ್ಕೊಮ್ಮೆ ನಗರ ಸಾರಿಗೆ ಬಸ್ಗಳ ವ್ಯವಸ್ಥೆಯನ್ನು ಇಂದಿನಿಂದ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ತುಮಕೂರು ನಗರದ ರಾಷ್ಟೀಯ ಹೆದ್ದಾರಿ-೪ರಲ್ಲಿ ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರ ಹಾಗೂ ಕಾಮಗಾರಿ ಪ್ರಗತಿ ಕುರಿತ…