ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗೂ ಮೊದಲು ಕೊಟ್ಟ ಭರವಸೆಯಂತೆ ಒಳಮೀಸಲಾತಿ ಜಾರಿ ಮಾಡುತ್ತಾರೆಂಬ ವಿಶ್ವಾಸವಿದೆ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀ ಅಭಿಪ್ರಾಯ
ಮಧುಗಿರಿ:ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗೂ ಮೊದಲು ಕೊಟ್ಟ ಭರವಸೆಯಂತೆ ಒಳಮೀಸಲಾತಿ ಜಾರಿ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲ್ಲೂಕಿನ ಕಸಬಾ ಹೋಬಳಿಯ ಜಡೇಗೊಂಡನಹಳ್ಳಿ ಬಳಿ ಇರುವ ನಿವೃತ್ತ ಅಪಾರ ಜಿಲ್ಲಾಧಿಕಾರಿ ಈರಪ್ಪನವರ ಮನೆಗೆ ಭೇಟಿ ನೀಡಿ ಆಶೀರ್ವದಿಸಿ ಮಾತನಾಡಿದ ಅವರು ಒಳಮೀಸಲಾತಿ ವಿಚಾರವಾಗಿ ಚರ್ಚೆ ನಡೆಸಿದ ಶ್ರೀಗಳು ಎಬಿಸಿಡಿ ವರ್ಗೀಕರಣ ಜಾರಿ ವಿಳಂಭವಾಗುತ್ತಿದ್ದು ಜಾತಿವಾರು ಅಂಕಿಅಂಶ ಪರಿಶಿಷ್ಟ ಜಾತಿಯಲ್ಲಿ ಯಾವ ಯಾವ ಜಾತಿಗಳು ಎಷ್ಟು ಪರ್ಸೇಂಟ್…