ಎಸ್.ಎಸ್.ಎಲ್.ಸಿ. ಪರೀಕ್ಷೆ: ಸೇಂಟ್ ಮೇರಿಸ್ ಪ್ರೌಢಶಾಲೆಗೆ ಶೇ.100 ಫಲಿತಾಂಶ
ತುರುವೇಕೆರೆ: ತಾಲ್ಲೂಕಿನ ದೊಡ್ಡೇನಹಳ್ಳಿಯ ಸೇಂಟ್ ಮೇರಿಸ್ ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ 100 ರಷ್ಟು ಪಲಿತಾಂಶ ಪಡೆದಿದೆ ಎಂದು ಶಾಲೆಯ ನೂತನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಎಂ.ಎಸ್. ಗಂಗಾಧರ ದೇವರಮನೆ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಅಕ್ರಮ ತಡೆಗಟ್ಟುವ ಹಾಗೂ ಪಾರದರ್ಶಕತೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಹೊಸ ತೀರ್ಮಾನ ಕೈಗೊಂಡಿದ್ದು, ಪರೀಕ್ಷಾ ಫಲಿತಾಂಶ ಎಲ್ಲರ ಗಮನ ಸೆಳೆದಿತ್ತು. ಮೊದಲ ಬಾರಿ ಸಿಸಿ ಕ್ಯಾಮೆರಾ ಕಣ್ಣಿನ ಕಣ್ಗಾವಲಿನಲ್ಲಿ ಪರೀಕ್ಷೆ…