ಯುವ ಸಮುದಾಯ ಶಿಕ್ಷಣದ ಜೊತೆಗೆ ಸಾಮಾಜಿಕ, ಧಾರ್ಮಿಕ ಕಳಕಳಿ ಹೊಂದಿದಾಗ ಸಮಾಜದಲ್ಲಿ ಬದಲಾವಣೆ ಸಾಧ್ಯ ಮುರಳೀಧರ ಹಾಲಪ್ಪ
ಗುಬ್ಬಿ: ಇಂದಿನ ಯುವ ಸಮುದಾಯ ಶಿಕ್ಷಣದ ಜೊತೆಗೆ ಸಾಮಾಜಿಕ, ಧಾರ್ಮಿಕ ಕಳಕಳಿ ಹೊಂದಿದಾಗ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗುತ್ತದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಮುರಳೀಧರ ಹಾಲಪ್ಪ ಅಭಿಪ್ರಾಯಪಟ್ಟರು. ತಾಲೂಕಿನ ನಿಟ್ಟೂರು ಹೋಬಳಿ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯದ ಉದ್ಘಾಟನೆ ಹಾಗೂ ಕಲಶರೋಹಣ ಧ್ವಜಸ್ತಂಬ ಪ್ರತಿಷ್ಠಾಪನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಯುವಜನತೆಯಲ್ಲಿ ಯಾವುದು ಒಳಿತು, ಯಾವುದು ಕೆಡುಕು ಎಂದು ಚಿಂತಿಸುವ ಸಾಮರ್ಥ್ಯವಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ…