ವರ್ತುಲ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶುಭ ಕಲ್ಯಾಣ್ ಸೂಚನೆ
ತುಮಕೂರು: ಸಾರ್ವಜನಿಕರ ಅನುಕೂಲಕ್ಕಾಗಿ ಶಿರಾ ಗೇಟ್-ಗುಬ್ಬಿ ಗೇಟ್‍ವರೆಗೂ ಸಂಪರ್ಕಿಸುವ ವರ್ತುಲ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ವರ್ತುಲ ರಸ್ತೆ ಕಾಮಗಾರಿ ಪರಿಶೀಲನೆಗಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು ನಗರದ ಎಸ್ ಮಾಲ್ ಬಳಿ ಕೈಗೊಂಡಿರುವ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಕೋಡಿ ಬಸವಣ್ಣ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳು ಶಿರಾಗೇಟ್-ಗುಬ್ಬಿಗೇಟ್ ಮಾರ್ಗದಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಯಾವುದೇ ಅಪಘಾತಗಳು…