Karnataka ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಮದನಘಟ್ಟದ ಇತಿಹಾಸ ಪ್ರಸಿದ್ಧ ಶ್ರೀ ಮಾರಮ್ಮದೇವಿಯರ ಜಾತ್ರಾ ಮಹೋತ್ಸವ ಮಂಗಳವಾರ ರಾತ್ರಿ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ಶ್ರೀ ಮಾರಮ್ಮದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನಂತರ ಶ್ರೀ ಮಾರಮ್ಮದೇವಿಯರ ರಥೋತ್ಸವ ನೇರವೇರಿತು. ಮಂಗಳವಾರ ರಾತ್ರಿ ಶ್ರೀ ಮಾರಮ್ಮ ದೇವಿಯ ಉತ್ಸವ ಮೆರವಣಿಗೆ, ಪೂಜಾರರ ಕುಣಿತ, ಕತ್ತಿ ವರಸೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಮಾರಮ್ಮ ದೇವಿಯ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ರಂಗಸ್ವಾಮಯ್ಯ ಮಾತನಾಡಿ ಮದನಘಟ್ಟ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮಾರಮ್ಮ ದೇವಿಗೆ ಸುಮಾರು 700 ವರ್ಷಗಳ ಇತಿಹಾಸವಿದೆ. ಶಿವಮೊಗ್ಗ, ತುಮಕೂರು, ಬೆಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಜಾತ್ರೆಗೆ ಆಗಮಿಸುತ್ತಾರೆ. ಪ್ರತಿ ವರ್ಷವೂ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗುತ್ತದೆ. ಇಲ್ಲಿಗೆ ಬರುವ ಭಕ್ತರ ಇಷ್ಟಾರ್ಥಗಳು ಈಡೇರುತ್ತವೆ ಎಂದರು. ದೇವಸ್ಥಾನದ ಅರ್ಚಕ ಕಿರಣ್ ಮಾತನಾಡಿ ಪ್ರತಿ ವರ್ಷವೂ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲಾಗುತ್ತದೆ. ರಥೋತ್ಸವ ಸೇರಿದಂತೆ ಶ್ರೀ ಮಾರಮ್ಮ ದೇವಿಯ ಉತ್ಸವ ಹಾಗೂ ಬುಧವಾರ ರಾತ್ರಿ ಪೆಟ್ಟಿಗೆ ಮಾರಮ್ಮನ ಉತ್ಸವ ನಡೆಯಲಿದೆ ಎಂದರು. ಒಟ್ಟಾರೆಯಾಗಿ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿದ
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಮದನಘಟ್ಟದ ಇತಿಹಾಸ ಪ್ರಸಿದ್ಧ ಶ್ರೀ ಮಾರಮ್ಮದೇವಿಯರ ಜಾತ್ರಾ ಮಹೋತ್ಸವ ಮಂಗಳವಾರ ರಾತ್ರಿ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ಶ್ರೀ ಮಾರಮ್ಮದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನಂತರ ಶ್ರೀ ಮಾರಮ್ಮದೇವಿಯರ ರಥೋತ್ಸವ ನೇರವೇರಿತು. ಮಂಗಳವಾರ ರಾತ್ರಿ ಶ್ರೀ ಮಾರಮ್ಮ ದೇವಿಯ ಉತ್ಸವ ಮೆರವಣಿಗೆ, ಪೂಜಾರರ ಕುಣಿತ, ಕತ್ತಿ ವರಸೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ…