ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ತುಮಕೂರು: ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು. ಜಿಲ್ಲಾ ಪಂಚಾಯತಿಯ ತಮ್ಮ ಕೊಠಡಿಯಲ್ಲಿಂದು ವಿವಿಧ ಯೋಜನೆಗಳ ಪ್ರಗತಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಆದ್ಯತೆ ಮೇರೆಗೆ ಕಾಯ್ದುಕೊಳ್ಳಲಾಗುತ್ತಿದೆ. ಕಳಪೆ ಕಾಮಗಾರಿಗಳು ಕಂಡು ಬಂದಲ್ಲಿ ತಾಲ್ಲೂಕು ಪಂಚಾಯತಿ…