ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿಯಿಂದ ವಿಶೇಷವಾಗಿ ಮಕ್ಕಳೊಂದಿಗೆ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ
ತುಮಕೂರು : ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಅಗತ್ಯವಾದ ವಸ್ತುಗಳನ್ನು ಧೇಣಿಗೆಯಾಗಿ ನೀಡುವುದರ ಮೂಲಕ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿ ಗಮನ ಸೆಳೆದರು. ತುಮಕೂರಿನ ದಿಬ್ಬೂರು ಬಡಾವಣೆಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿನ ಮಕ್ಕಳು ಮಧ್ಯಾಹ್ನ ಊಟಕ್ಕೆ ಉಪಯೋಗಿಸಲು ತಟ್ಟೆ, ಲೋಟಗಳು ಹಾಗೂ ಶೈಕ್ಷಣಿಕ ಪರಿಕರಗಳನ್ನು ಧೇಣಿಗೆಯಾಗಿ ನೀಡಿ ವಿಶಿಷ್ಠ ರೀತಿಯಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯಲ್ಲಿ ಧ್ವಜಾರೋಹಣ…