ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದ ಗಾಜಿನ ಸೇತುವೆ ನಿರ್ಮಾಣ- ಡಾ, ಜಿ, ಪರಮೇಶ್ವರ
ತುಮಕೂರು: ಪ್ರವಾಸೋದ್ಯಮ ಅಭಿವೃದ್ಧಿಗಾಗಿ ನಗರದ ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಗ್ಲಾಸ್ ಬ್ರಿಡ್ಜ್(ಗಾಜಿನ ಸೇತುವೆ) ನಿರ್ಮಾಣಕ್ಕೆ ನೀಲ ನಕ್ಷೆಯನ್ನು ಸಿದ್ಧಪಡಿಸಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 200 ಕೋಟಿ ರೂ.ಗಳ ಅನುದಾನಕ್ಕೆ ಸರ್ಕಾರ…