ಜೂ.24 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 : ತ್ರಿಸದಸ್ಯ ಸಮಿತಿ ರಚನೆ
ತುಮಕೂರು: ಜಿಲ್ಲೆಯಲ್ಲಿ ಜೂನ್ 24 ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ನ್ನು ವ್ಯವಸ್ಥಿತವಾಗಿ ನಡೆಸುವ ದೃಷ್ಟಿಯಿಂದ ಪರೀಕ್ಷಾ ಕಾರ್ಯ ಮತ್ತು ತಾಂತ್ರಿಕ ಕಾರ್ಯಗಳ ನಿರ್ವಹಣೆಗೆ ತ್ರಿಸದಸ್ಯ ಸಮಿತಿಯನ್ನು ರಚಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪರೀಕ್ಷೆಗೆ ನೋಂದಣಿಯಾದ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಪಡೆದು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್, ಆರೋಗ್ಯ ಕಾರ್ಯಕರ್ತರ…