ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ
ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ರೈತರು ಏಕಕಾಲದಲ್ಲಿ ಮುಂಗಾರು ಹಂಗಾಮಿನ ಬಿತ್ತನೆಯನ್ನು ಪ್ರಾರಂಭಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಸಂಜೆ ಮುಂಗಾರು ಹಂಗಾಮಿನ ಸಿದ್ಧತೆ ಕುರಿತು ಕೃಷಿ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ರೈತರ ಬೇಡಿಕೆಗನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ದಾಸ್ತಾನು…