ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ಟಿ.ಸುಂದರಮೂರ್ತಿ
ತುಮಕೂರು : ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸನ್ನ ಸಾಧಿಸಲು ಸಾಧ್ಯವಾಗುತ್ತದೆ. ಪ್ರಾಮಾಣಿಕವಾಗಿ ನಿರಂತರ ಸಾಧನೆಯಲ್ಲಿ ತೊಡಗಿಸಿಕೊಂಡರೆ ಸಫಲತೆ ಕಾಣಬಹುದು ಎಂದು ಇಸ್ರೋದ ಮಾಜಿ ಪ್ರಾಜೆಕ್ಟ್ ಇಂಜಿನಿಯರ್ ಹಾಗೂ ವಿಜ್ಞಾನಿ ಕೆ.ಟಿ. ಸುಂದರಮೂರ್ತಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು. ತುಮಕೂರಿನ ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 18ನೇ ಬ್ಯಾಚ್‍ನ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಹಳೆ ವಿದ್ಯಾರ್ಥಿಸಂಘದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನವೋದಯ ವಿದ್ಯಾಲಯದ ಕಾರ್ಯ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. …