ಸಾಂಸ್ಕೃತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿ : ಅಶೋಕ್ ಮೆಹ್ತ
ತುಮಕೂರು: ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ. ಅಶೋಕ್ ಮೆಹ್ತ ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆದ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರ ಆಯೋಜಿಸಿರುವ “ಇನ್‍ಸ್ಪಿರೋ “ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶೈಕ್ಷಣಿಕ ಜೀವನದ ಜೊತೆ ಜೊತೆಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಹೆಚ್ಚಾಗಿ ಆತ್ಮ ವಿಶ್ವಾಸ ಮೂಡುತ್ತದೆ ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗ…