ವಕೀಲರ ದಿನಾಚರಣೆ_ಆರೋಗ್ಯ ತಪಾಸಣಾ ಶಿಬಿರ ಜಿಲ್ಲಾ ವಕೀಲರ ಸಂಘದಿಂದ ವಕೀಲರ ದಿನ ಆಚರಣೆ
ತುಮಕೂರು: ವಕೀಲರ ದಿನಾಚರಣೆ ಅಂಗವಾಗಿ ಜಿಲ್ಲಾ ವಕೀಲರ ಸಂಘದಿಂದ ನ್ಯಾಯಾಲಯ ಆವರಣದ ವಕೀಲರ ಭವನದಲ್ಲಿ ಬುಧವಾರ ವಕೀಲರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಯಂತ್‍ಕುಮಾರ್ ಅವರು ಜ್ಯೋತಿ ಬೆಳಗಿ ಶಿಬಿರ ಉದ್ಘಾಟಿಸಿ, ನಾನೂ ವಕೀಲನಾಗಿ ವಕೀಲರ ದಿನಾಚರಣೆ ಸಂಭ್ರಮದಲ್ಲಿ ಭಾಗಿಯಾಗಿದ್ದೇನೆ, ಎಲ್ಲಾ ವಕೀಲರಿಗೂ ಶುಭಾಶಯಗಳು ಎಂದು ಹೇಳಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯ ಮಾತನಾಡಿ, ದೈನಂದಿನ ಕೆಲಸದ ಒತ್ತಡ ವಕೀಲರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ…