ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಯಶಸ್ವಿಗೆ ಪೂರ್ವಭಾವಿ ಸಭೆ
ಗುಬ್ಬಿ ಸುದ್ದಿ ಸೆ.15 ರ ಭಾನುವಾರದಂದು ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿರುವ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದ ಹಿನ್ನೆಲೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ್ ಆರತಿ ಬಿ. ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಹಶೀಲ್ದಾರ್ ಆರತಿ ಬಿ. ಮಾತನಾಡಿ ಪ್ರಜಾ ಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿ ಮೇಲೆ ನಿಂತಿದೆ. ಈ ಭದ್ರ ಬುನಾದಿ ಬಲಿಷ್ಠವಾಗದಿದ್ದರೆ ಪ್ರಜಾಪ್ರಭುತ್ವ ಬಲಿಷ್ಠವಾಗಲಾರದು. ಆದ್ದರಿಂದ ಸಮಾನತೆ, ಸ್ವಾಂತ್ರಂತ್ರ್ಯ ಭ್ರಾತೃತ್ವದ ಆದರ್ಶಗಳು…