ಗುಬ್ಬಿ ತಾಲೂಕಿನ ಕೊಂಡ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ವೀಣಾ ಸತೀಶ್ ಅವರು ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಇದುವರೆಗೂ ಇದ್ದರು ಈಗ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್‍ಡಿ ದಿಲೀಪ್ ಕುಮಾರ್ ತಿಳಿಸಿದರು.
ಪಟ್ಟಣದ ಅವರ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದಲ್ಲಿ ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರ ಆಯ್ಕೆ ಮತ್ತು ತುಮಕೂರು ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ದೊರೆತಿರುವುದು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ದೊಡ್ಡ ಮಟ್ಟದಲ್ಲಿ ಶಕ್ತಿ ಸಿಕ್ಕಿದೆ ಮುಂದಿನ ಸ್ಥಳೀಯ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿಯಲ್ಲಿಯೂ ಸಹ ನಾವೆಲ್ಲರೂ ಒಟ್ಟಾಗಿ ಇದ್ದುಕೊಂಡೆ ಪಕ್ಷವನ್ನು ಕಟ್ಟುವ ಕೆಲಸವನ್ನು ಮಾಡುತ್ತೇವೆ ತಾಲೂಕಿನಲ್ಲಿ ಬಿಜೆಪಿಯ ಪರ್ವವೇ ಆರಂಭವಾಗಿದ್ದು ಏನ್ ಡಿ ಎ ಕಾರ್ಯಕರ್ತರ ಶಕ್ತಿ ಏನೆಂಬುದು ಇಡೀ ಜಿಲ್ಲೆಗೆ ಅರಿವಾಗಿದೆ ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರು ಇರುವಂತಹ ಭಾಗದಲ್ಲಿ ಯಾವುದೇ ರೀತಿಯ ಕೆಲಸ ಕಾರ್ಯಗಳು ತಾಲೂಕಿನಲ್ಲಿ ಇದುವರೆಗೂ ನಡೆದಿಲ್ಲ ವಿ ಸೋಮಣ್ಣನವರು ಹೆಚ್ಚಿನ ರೀತಿಯ ಅನುದಾನವನ್ನು ತಂದು ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡುತ್ತಾರೆ ಹಾಗಾಗಿ ಅವರು ಸಚಿವರಾಗಿರುವುದು ನಮಗೆಲ್ಲ ದೊಡ್ಡ ಶಕ್ತಿ ಆಗಿದೆ ಎಂದು ತಿಳಿಸಿದ ಅವರು ಹಾಗಲವಾಡಿ ಹೋಬಳಿ ಕೆರೆಗಳಿಗೆ ನೀರು ಹರಿಸುವಂತ ಕೆಲಸವನ್ನು ವಿ ಸೋಮಣ್ಣನವರು ಮಾಡಿಯೇ ಮಾಡುತ್ತಾರೆ ಹಲವು ಗ್ರಾಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ವಿಜಯೋತ್ಸವ ಆಚರಣೆ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಹಲ್ಲೆ ಮಾಡಿರುವಂತಹ ಘಟನೆ ನಡೆದಿರುವುದು ನಿಜವಾಗಿಯೂ ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಕಾರೇಕುರ್ಚಿ ಸತೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಞಾನಾಂಬಿಕ, ಉಪಾಧ್ಯಕ್ಷ ಸೋಮಣ್ಣ, ತಮ್ಮೇಗೌಡ, ಕೆಂಪಣ್ಣ, ರಮೇಶ್, ಮಂಜಣ್ಣ ಲೋಕೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.