ನಗರದಲ್ಲಿ 39ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: ಆ.3ರಿಂದ ಮಕ್ಕಳು, ಹಿರಿಯರಿಗೆ ವಿವಿಧ ಸ್ಪರ್ಧೆ ಆಯೋಜನೆ

ತುಮಕೂರು: ನಗರದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಬರುವ ಆಗಸ್ಟ್ 17ರಂದು ನಗರದ ಕೆ.ಆರ್.ಬಡಾವಣೆಯ ಶ್ರೀರಾಮ ಮಂದಿರದಲ್ಲಿ 39ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಅಂಗವಾಗಿ ಆಗಸ್ಟ್ 3ರಿಂದ ವಿವಿಧ ವಯೋಮಾನದವರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಸಮಿತಿ ಉಪಾಧ್ಯಕ್ಷ ಜಿ.ಎಸ್.ಬಸವರಾಜು ಹೇಳಿದರು.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಮ್ಮ ಸಂಸ್ಕøತಿ, ಆಚಾರವಿಚಾರಗಳ ಮಹತ್ವವನ್ನು ಮುಂದಿನ ತಲೆಮಾರಿನವರಿಗೆ ಪರಿಚಯಿಸಿ ಆಸಕ್ತಿ ಮೂಡಿಸಲು ಕಳೆದ 38 ವರ್ಷಗಳಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

 

ಈ ಬಾರಿ ವಿಶೇಷವಾಗಿ ಮಕ್ಕಳಿಗಾಗಿ ಶ್ರೀ ಕೃಷ್ಣ ವೇಷ ಸ್ಪರ್ಧೆಯಲ್ಲಿ ಒಂದು ವರ್ಷದೊಳಗಿನ ಮಕ್ಕಳಿಗೆ ಅಂಬೆಗಾಲು ಕೃಷ್ಣ, 3 ವರ್ಷದೊಳಗಿನ ಮಕ್ಕಳಿಗೆ ಮುದ್ದು ಕೃಷ್ಣ, 3ರಿಂದ 5 ವರ್ಷದೊಳಗಿನ ಮಕ್ಕಳಿಗೆ ಬಾಲಕೃಷ್ಣ, 5ರಿಂದ 8 ವರ್ಷದ ಮಕ್ಕಳಿಗೆ ಕಿಶೋರ ಕೃಷ್ಣ ವೇಷ ಸ್ಪರ್ಧೆ ಸೇರಿದಂತೆ ವಿವಿಧ ಆಕರ್ಷಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿಶೇಷ ಚೇತನ ಮಕ್ಕಳಿಗೆ ಪ್ರತ್ಯೇಕ ಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿದೆ. ಆಗಸ್ಟ್ 17ರಂದು ಶ್ರೀರಾಮ ಮಂದಿರದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ತುಮಕೂರು ತಾಲ್ಲೂಕು ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ, ಸಂಸ್ಕಾರ ಭಾರತಿ ಅಧ್ಯಕ್ಷ ಬಿ.ಆರ್.ನಟರಾಜಶೆಟ್ಟಿ, ಸಮಿತಿ ಅಧ್ಯಕ್ಷೆ ರೇಖಾ ಮಹೇಶ್ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಹೇಳಿದರು.

ಸಮಿತಿ ಅಧ್ಯಕ್ಷೆ ರೇಖಾ ಮಹೇಶ್ ಮಾತನಾಡಿ, ಆಗಸ್ಟ್ 3ರಂದು ವಿವಿಧ ವಯೋಮಾನದವರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಜನಪದ ಗೀತೆ, ಭಜನಾ, ನೆನಪಿನ ಶಕ್ತಿ, ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. ಆಗಸ್ಟ್ 10ರಂದು ಬೆಳಿಗ್ಗೆ ಭಗವದ್ಗೀತಾ ಕಂಠಪಾಠ ಸ್ಪರ್ಧೆ, ಮಧ್ಯಾಹ್ನ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ದೇವರನಾಮ ಸ್ಪರ್ಧೆ, ಸಂಜೆ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸ್ಪರ್ಧೆಗಳು ಶ್ರೀರಾಮ ಮಂದಿರಲ್ಲಿ ನಡೆಯಲಿವೆ ಎಂದು ಹೇಳಿದರು.

 

ಸ್ಪರ್ಧೆಗಳಲ್ಲಿ ಭಾಗವಹಿಸುವವರು ಶ್ರೀರಾಮ ಮಂದಿರದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು ಅಥವಾ ಸ್ಪರ್ಧೆಯ ಸಮಯದಲ್ಲಿ ಸ್ಥಳದಲ್ಲೇ ನೋಂದಾಯಿಸಿ ಭಾಗವಹಿಸಬಹುದು. ನಮ್ಮ ಸಂಸ್ಕøತಿ, ಸಂಪ್ರದಾಯ ಬಿಂಬಿಸುವ ಈ ಕಾರ್ಯಕ್ರಮಗಳಲ್ಲಿ ಮಕ್ಕಳು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಅಧ್ಯಕ್ಷೆ ರೇಖಾ ಮಹೇಶ್ ಕೋರಿದರು.

 

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಶಂಕರ್, ಅನಿತ ರಮೇಶ್, ಖಜಾಂಚಿ ಕೆ.ಪರಶುರಾಮಯ್ಯ, ಉಪಾಧ್ಯಕ್ಷ ಜಯಶಂಕರಮೂರ್ತಿ, ಸಂಚಾಲಕಿ ಕಲ್ಪನಾ ಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!