ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಸಂಘದ ಸದಸ್ಯರ ಮಕ್ಕಳಿಗೆ “ಡಾ. ಜಿ. ಪರಮೇಶ್ವರ -ಕನ್ನಿಕಾ ಪರಮೇಶ್ವರ ಉನ್ನತ ಶಿಕ್ಷಣ ಪ್ರೋತ್ಸಾಹ ಧನ” ಯೋಜನೆಯಡಿ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ನಗರ ನಿವಾಸಿ ಪತ್ರಕರ್ತರಿಗೆ ಆರೋಗ್ಯ ವಿಮೆ ಕಾರ್ಡ್ ವಿತರಣಾ ಕಾರ್ಯಕ್ರಮ ನಗರದ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಭಾನುವಾರ ಮಧ್ಯಾಹ್ನ ೩:೩೦ಕ್ಕೆ ಅಯೋಜಿಸಲಾಗಿದೆ
ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಾ ಜಿ ಪರಮೇಶ್ವರ್ ಮಾನ್ಯ ಸಾಹೇ ಕುಲಾಧಿಪತಿಗಳು ಹಾಗೂ ಗೃಹ ಸಚಿವರು ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಅವರು ಉದ್ಘಾಟನೆ ಮಾಡಲಿದ್ದು,ಕಾರ್ಯಕ್ರಮದಲ್ಲಿ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಕನ್ನಿಕಾ ಪರಮೇಶ್ವರ್ ಅವರು ಉಪಸ್ಥಿತರಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಚೀನಿ ಪುರುಷೋತ್ತಮ್ ಅವರು ವಹಿಸಲಿದ್ದು, ತುಮಕೂರು ನಗರದ ಜನಪ್ರಿಯ ಶಾಸಕರಾದ ಜಿಬಿ ಜ್ಯೋತಿಗಣೇಶ್ ಅವರು ನಗರ ಪತ್ರಕರ್ತರಿಗೆ ಆರೋಗ್ಯ ವಿಮೆ ಕಾರ್ಡ್ ವಿತರಣೆ ಮಾಡಲಿದ್ದಾರೆ, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಅಧ್ಯಕ್ಷರಾದ ಬಿವಿ ಮಲ್ಲಿಕಾರ್ಜುನಯ್ಯ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ್ ಎಂ ಗೌಡ, ಡಿಟಿ ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ಬಿವಿ ಅಶ್ವಿಜಾ, ಸೇರಿದಂತೆ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರು, ರಾಜ್ಯ ಮಂಡಳಿ ಸದಸ್ಯರು, ತುಮಕೂರು ಜಿಲ್ಲಾ ಘಟಕದ ಉಪಾಧ್ಯಕ್ಷರು, ನಿರ್ದೇಶಕರುಗಳು, ಪದಾಧಿಕಾರಿಗಳು ಸೇರಿದಂತೆ ಸಂಘದ ಸದಸ್ಯರು ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ ರಘುರಾಮ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚೀನಿ ಪುರುಷೋತ್ತಮ್ ಮಾತನಾಡಿ ಇಡೀ ರಾಜ್ಯದಲ್ಲಿಯೇ ಪತ್ರಕರ್ತರ ಮಕ್ಕಳ ಶಿಕ್ಷಣ ವಿದ್ಯಾಭ್ಯಾಸ ಮುಂದುವರೆಯಲಿ ಎಂದು ನಮ್ಮ ನಾಡಿನ ಶಿಕ್ಷಣ ಭೀಷ್ಮ ಎಂದೇ ಖ್ಯಾತರಾದ ದಿ. ಗಂಗಾಧರಯ್ಯನವರ ಪುತ್ರ ಹಾಗೂ ರಾಜ್ಯದ ಸರಳ ಸಜ್ಜನಿಕೆಯ ರಾಜಕಾರಣಿ, ಅಜಾತಶತ್ರು ರಾಜ್ಯ ಕಂಡ ಗೃಹಮಂತ್ರಿ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಅವರ ಆಶಯದಂತೆ ಜಿ ಪರಮೇಶ್ವರ್ ಹಾಗೂ ಶ್ರೀಮತಿ ಕನ್ನಿಕಾ ಪರಮೇಶ್ವರ್ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ಧನ ದತ್ತಿನಿಧಿಯಡಿ ಎಸ್ ಎಸ್ ಎಲ್ ಸಿ , ಪಿಯುಸಿಯಲ್ಲಿ ಶೇಕಡ ೯೮% ೯೯%ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಒಂದು ಲಕ್ಷ ಪ್ರೋತ್ಸಾಹ ಧನ, ೮, ೯ ತರಗತಿ ಸೇರಿದಂತೆ ಪದವಿ ಪಡೆದ ವಿದ್ಯಾರ್ಥಿಗಳಿಗೆ ವಿಶೇಷವಾದ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು,
ಇಂಜಿನಿಯರಿಂಗ್ ಪದವಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಅಂಕಿತ ಎಂಬುವವರಿಗೂ ವಿಶೇಷ ಪ್ರತಿಭಾ ಪುರಸ್ಕಾರವನ್ನು ಕೊಡಮಾಡುತ್ತಿದ್ದು ವಿಶೇಷವಾಗಿ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ತುಮಕೂರು ನಗರ ಪತ್ರಕರ್ತರುಗಳಿಗೆ ಉಚಿತ ಆರೋಗ್ಯ ವಿಮೆ ಕಾರ್ಡ್ ಕೊಡ ನೀಡಲಾಗುತ್ತಿದ್ದು ಇದು ಕೂಡ ತುಮಕೂರು ಜಿಲ್ಲೆಯಲ್ಲಿ ವಿಶೇಷವೆನಿಸಿದೆ, ಎಲ್ಲಾ ಕಾರ್ಯಕ್ರಮಗಳು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಅವರ ಆಶಯದಂತೆ ನಡೆಯುತ್ತಿದ್ದು ಜಿಲ್ಲೆಯ ಎಲ್ಲಾ ಪತ್ರಕರ್ತರು ಸಾರ್ವಜನಿಕರು ಪೋಷಕರುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾನುವಾರ ನಡೆಯಲಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.