ಪ್ಲಾಸ್ಟಿಕ್‍ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ’  ಡಾ ಸಂಜೀವ್ ಕುಮಾರ್

ತುಮಕೂರು: ಅಪಾರ ಅಣ್ಯಗಳ ನಾಶದಿಂದ ಇಂದು ಭೂಮಿಯ ಉಷ್ಣಾಂಶ ಹೆಚ್ಚಾಗಿದ್ದು ಜೀವಜಂತುಗಳು ನಲುಗುತ್ತಿದೆ ಇದರಿಂದ ಮುಕ್ತಿ ದೊರೆಯಬೇಕೆಂದರೆ ಹೆಚ್ಚಾಗಿ ಗಿಡಗಳನ್ನು ನೆಟ್ಟಾಗ ಮಾತ್ರ ಜೀವ ಸಂಕುಲ ಉಳಿಯುತ್ತದೆ ಎಂದು ಶ್ರೀ ಸಿದ್ಧಾರ್ಥ ಸ್ಕೂಲ್ ಆಪ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜೀವ್ ಕುಮಾರ್ ತಿಳಿಸಿದರು.

ನಗರದ ಹೊರವಲಯದ ಕ್ಯಾತ್ಸಂದ್ರದಲ್ಲಿರುವ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ವಿಶ್ವ ಪರಿಸರದ ದಿನದ ಪ್ರಯುಕ್ತ ಗಿಡನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಧಾಟಿಸಿ ಮಾತನಾಡಿದ ಅವರು ಇಂದು ನಾವು ಸಾಕಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್ ಕೈ ಚೀಲಗಳು, ಪ್ಲಾಸ್ಟಿಕ್ ಬಾಟೆಲ್‍ಗಳು ಸೇರಿದಂತೆ ಹಲವು ವಸ್ತುಗಳನ್ನು ಬಳಸಿ ಎಸೆಯುತ್ತಿದ್ದೇವೆ ಇದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಪ್ಲಾಸ್ಟಿಕ್‍ಗೆ ಪರ್ಯಾಯವಾಗಿ ತಂತ್ರಜ್ಞಾನದ ಮೂಲಕ ಹಲವು ರೀತಿಯ ಮಣ್ಣಲ್ಲಿ ಕರಗುವ ವಸ್ತಗಳನ್ನು ಸಂಶೋಧಿಸಿದ್ದಾರೆ. ಇಂತಹ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದರ ಮೂಲಕ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಪ್ರಯತ್ಸವನ್ನು ಮಾಡೋಣ, ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಿಸಿ ಪರಿಸರ ಸಂರಕ್ಷಣೆಯನ್ನು ಮಾಡೋಣ ಎಂದು ಕರೆ ಕೊಟ್ಟರು.

 

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ನೂರಾರು ಗಿಡಗಳನ್ನು ನೆಟ್ಟು ನೀರೆರೆಯುವ ಮೂಲಕ ಪರಿಸರ ದಿನಾಚಾರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು

Leave a Reply

Your email address will not be published. Required fields are marked *

error: Content is protected !!