ಜೂನ್ 21 ರಂದು ಸಹಕಾರ ಸಚಿವ ಕೆಎನ್ ರಾಜಣ್ಣನವರ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆಯ ಅಂಗವಾಗಿ ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಪತ್ರಿಕಾಗೋಷ್ಠಿ ನಡೆಸಿದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜೂನ್ 21 ರಂದು ಕೆ, ಎನ್, ರಾಜಣ್ಣನವರ 75ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಮೃತ ಮಹೋತ್ಸವವನ್ನು ಏರ್ಪಡಿಸಲಾಗಿದ್ದು ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಒಟ್ಟಾಗಿ ಸೇರಿ ಅವರು ನಡೆದು ಬಂದ ಜೀವನದ ಆಧಾರಿತ ಅಭಿನಂದನಾ ಗ್ರಂಥದ ಪುಸ್ತಕವನ್ನು ಬಿಡುಗಡೆ ಮಾಡಲಾಗುತ್ತಿದ್ದು ಈ ಕಾರ್ಯಕ್ರಮಕ್ಕೆ ರಾಜ್ಯದ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಜಾತ್ಯತೀತ ಹಾಗೂ ಪಕ್ಷಾತೀತವಾಗಿದ್ದು ಕಾರ್ಯಕ್ರಮಕ್ಕೆ ರಾಜ್ಯದ ಹಿರಿಯ ರಾಜಕಾರಣಿಗಳು ಭಾಗವಹಿಸಲಿದ್ದಾರೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆ ಎನ್ ರಾಜಣ್ಣನವರ ಅಭಿಮಾನಿಗಳು ಭಾಗವಹಿಸಲಿದ್ದಾರೆ ಈ ಕಾರ್ಯಕ್ರಮ ಯಾವುದೇ ಶಕ್ತಿ ಪ್ರದರ್ಶನವಾಗದೆ ಕೆ ಎನ್ ರಾಜಣ್ಣನವರಿಗೆ ಅಭಿನಂದನೆ ಸಲ್ಲಿಸುವ ಉದ್ದೇಶವಾಗಿರುತ್ತದೆ ಎಂದು ತಿಳಿಸಿದರು.
ಅಭಿನಂದನ ಸಮಾರಂಭಕ್ಕೆ ಸರಿ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಹಾಗಾಗಿ ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ಸಕಲ ಸಿದ್ಧತೆಗಳನ್ನು ಈಗಾಗಲೇ ಮಾಡಲಾಗಿದ್ದು ಇದಕ್ಕೆ ರಾಜ್ಯದ ಜನತೆಯ ಸಹಕಾರ ಮತ್ತು ಮಾಧ್ಯಮದ ಸಹಕಾರ ಅತ್ಯಗತ್ಯವಾಗಿದೆ ತಾವೆಲ್ಲರೂ ಕಾರ್ಯಕ್ರಮಕ್ಕೆ ಭಾಗವಹಿಸುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿ ಮಾಡಿ ಕೊಡಬೇಕೆಂದು ಕೆ ಎನ್ ರಾಜಣ್ಣನವರ ಅಭಿಮಾನಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ವಿಧಾನ ಪರಿಷತ್ ಸದಸ್ಯ ಆರ್, ರಾಜೇಂದ್ರ ಮನವಿ ಮಾಡಿದರು