ತುಮಕೂರು: ಭಾರತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಸಮರ್ಪಣೆಯನ್ನು ಸ್ಮರಿಸುವಜೊತೆಗೆ, ಶಿಕ್ಷಣದ ಮೂಲಕ ರಾಷ್ಟ್ರದ ಪ್ರಗತಿಗೆಕೊಡುಗೆ ನೀಡುವ ಜವಾಬ್ದಾರಿಯನ್ನು ಪ್ರತಿಯೊಬ್ಬರು ಭರಿಸಬೇಕು ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಎನ್.ಬಿ.ಪ್ರದೀಪ್‍ಕುಮಾರ್ ಹೇಳಿದರು.
ನಗರದ ವೈಸಿರಿ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಅಂಡ್ ಟೆಕ್ನಾಲಜಿ ಹಾಗೂ ವೈಸಿರಿ ಪದವಿ ಪೂರ್ವಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಲಾದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿಸುವ ಗುರಿಯತ್ತ ದೃಢವಾದ ಕಾರ್ಯೋನ್ಮುಖ ಕ್ರಮಗಳು ಸಾಗುತ್ತಿವೆ. ಈ ಗುರಿಯ ಸಾಧನೆಗೆ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ರಾಷ್ಟ್ರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳು ಕೇವಲ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡದೇ, ಆ ಜ್ಞಾನವನ್ನು ರಾಷ್ಟ್ರದ ಉನ್ನತಿಗಾಗಿ ಸಮರ್ಪಿಸಬೇಕು. ಯುವಜನಾಂಗವೇ ದೇಶದ ಭವಿಷ್ಯದ ಶಕ್ತಿಯಾಗಿದ್ದು, ತಂತ್ರಜ್ಞಾನ, ಕೈಗಾರಿಕೆ, ಮತ್ತು ಸೇವಾ ಕ್ಷೇತ್ರಗಳಲ್ಲಿ ಭಾರತವನ್ನು ಬಲಿಷ್ಠ ರಾಷ್ಟ್ರವಾಗಿ ರೂಪಿಸುವ ಜವಾಬ್ದಾರಿಯನ್ನು ಹೊರಬೇಕು.ಇದಕ್ಕಾಗಿ ಆಧುನಿಕ ಶಿಕ್ಷಣ ಮತ್ತು ಕೌಶಲ್ಯಾಧಾರಿತ ಜ್ಞಾನವನ್ನು ಅರ್ಜಿಸಬೇಕು ಎಂದು ಹೇಳಿದರು.
ಒಂದುಕಾಲದಲ್ಲಿ ಭಾರತವುತಂತ್ರಜ್ಞಾನ, ಕೈಗಾರಿಕೆ, ಮತ್ತು ಶಸ್ತ್ರಾಸ್ತ್ರಗಳಿಗಾಗಿ ಇತರ ದೇಶಗಳನ್ನು ಅವಲಂಬಿಸಿತ್ತು.ಆದರೆಇಂದು, ಭಾರತವು ರಫ್ತುದಾರ ರಾಷ್ಟ್ರವಾಗಿ ಬಲಿಷ್ಠ ಸ್ಥಾನವನ್ನು ಗಳಿಸಿದೆ.ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ವಿಕಸಿತ ಮತ್ತು ಸದೃಢ ಭಾರತದ ಕನಸನ್ನು ಸಾಕಾರಗೊಳಿಸಲು ಪ್ರತಿಯೊಬ್ಬ ನಾಗರಿಕನೂ ಶ್ರಮಿಸಬೇಕು. ವಿದ್ಯಾರ್ಥಿಗಳು ಶಿಕ್ಷಣ, ಕ್ರೀಡೆ, ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಮೈಗೂಡಿಸಿಕೊಂಡು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕುಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.
ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷಶ್ರೀ ಕೆ.ಬಿ.ಜಯಣ್ಣ ಮಾತನಾಡಿ, ಸ್ವಾತಂತ್ರ್ಯವು ಕೇವಲ ರಾಷ್ಟ್ರದ ಸ್ವಾಧೀನತೆಯಷ್ಟೇ ಅಲ್ಲ, ಅದು ಪ್ರತಿಯೊಬ್ಬರ ವೈಯಕ್ತಿಕ ಮತ್ತು ಸಾಮಾಜಿಕ ಜವಾಬ್ದಾರಿಯನ್ನೂ ಪ್ರತಿಬಿಂಬಿಸುತ್ತದೆ. ಯುವಜನಾಂಗವು ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.
ಜೊತೆಗೆ ವೈಸಿರಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಚಿರಂಜೀವಿ. ಎಸ್, ಶ್ರೇಯಸ್ ಹಾಗೂ ವಿನಯ್ ಸಿ ಇವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸ್ಕೇಟಿಂಗ್ ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಿ ಚಾಂಪಿಯನ್‍ಶಿಪ್‍ಗಳನ್ನು ಗೆದ್ದು ಪದಕ ಗಳಿಸಿರುವ ಕ್ರೀಡಾಪಟು ಹಾಗೂ ವಿಮ್‍ಟೆಕ್‍ನ ಪ್ರಥಮ ಬಿಸಿಎ ವಿದ್ಯಾರ್ಥಿನಿ ಕುಮಾರಿ ಜಯತೇಶ್ಣ ಟಿ. ಜಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಧ್ವಜಾರೋಹಣ, ರಾಷ್ಟ್ರಗೀತೆಯ ಗಾಯನ, ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿಮ್‍ಟೆಕ್‍ನ ಪ್ರಾಂಶುಪಾಲರಾದ ಶ್ರೀಮತಿ ಅಮೂಲ್ಯ ಜಿ, ವೈಸಿರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪೂರ್ಣಗಂಗಾ ಹಾಗೂ ಎಂ.ಬಿ.ಎ ವಿಭಾಗದ ನಿರ್ದೇಶಕ ಡಾ. ಟಿ.ಎಂ.ಪ್ರಸನ್ನಕುಮಾರ್, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.